ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಯ ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿನ ಕುರಿತಾಗಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಹೌದು, ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸಿಎಂ, ಡಿಸಿಎಂ ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಇಂದು (ಶುಕ್ರವಾರ ಏ. 03) ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯು ಸೋಲಿನ ಭಯ ಎಂದು ಕಾಣುತ್ತಿದೆ ಆದ್ದರಿಂದ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನ ಪ್ರಚಾರಕ್ಕೆ ಕರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಬಿಜೆಪಿ ಯಾವಾಗಲೋ ಹೀನಾಯ ಸ್ಥಿತಿಗೆ ತಲುಪಿದ್ದಕ್ಕೆ ಯತ್ನಾಳ್ ಅವರನ್ನು ಕರೆಸಿದ್ದಾರೆ ಎಂದರು. ಇದನ್ನೂ ಓದಿ: ನಮ್ಮ ಕೈ ಪಡೆಯ ಶ್ರಮವೇ ಅಭ್ಯರ್ಥಿಯ ಗೆಲುವಿಗೆ ಶ್ರೀರಕ್ಷೆ: ಡಿಕೆಶಿ
ಇನ್ನು 15 ದಿನ ಅಥವಾ ಒಂದು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರುವುದಿಲ್ಲ ಎಂಬ ಕೇಂದ್ರ ಸಚಿವ ವಿ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ವಿ ಸೋಮಣ್ಣ ಅವರೇನು ನಮ್ಮ ಹೈಕಮಾಂಡಾ? ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ವಿ ಸೋಮಣ್ಣ ಕೆಲಸವಿಲ್ಲದ ಮಂತ್ರಿ ಎಂದು ತಿರುಗೇಟು ನೀಡಿದರು.
