Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೋದಿ ಸರ್ಕಾರ ಸಾಲ ಮಾಡಿಲ್ಲವೇ?: ಡಿಕೆಶಿ
  • Politics
  • State
  • ದಾವಣಗೆರೆ

ಮೋದಿ ಸರ್ಕಾರ ಸಾಲ ಮಾಡಿಲ್ಲವೇ?: ಡಿಕೆಶಿ

Praja Vahini April 3, 2026 1 minute read
WhatsApp Image 2026-04-03 at 17.10.37
Spread the love

ದಾವಣಗೆರೆ: ಹೌದಪ್ಪಾ, ನಾವು ಸಾಲ ಮಾಡಿದ್ದೀವಿ ಅಂದುಕೊಳ್ಳೋಣ. ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಪಡೆದಿಲ್ಲವೇ? ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಈಗ ನಾವು ಜನರಿಗೆ ಹಣ ಕೊಟ್ಟಿರುವುದಕ್ಕೆ ಅವರ ಮೇಲೆ ಹೊರೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ಕೂಡ ನಮ್ಮ ರೀತಿ ಯೋಜನೆ ನೀಡಲಿ. ಕೇಂದ್ರ ಸರ್ಕಾರ ಕೂಡ ಜನರ ಖಾತೆಗೆ ತಿಂಗಳಿಗೆ 10 ಸಾವಿರ ಹಾಕಲಿ. ಜನರ ಖಾತೆಗೆ 15 ಲಕ್ಷ ಹಾಕುತ್ತೇವೆ. ಅಚ್ಛೇದಿನ ತರುತ್ತೇವೆ ಎಂದಿದ್ದರಲ್ಲಾ ಬಂತಾ? ನಮಗೆ ಬೇಡ, ನಿಮಗೆ ಬಂದಿದೆಯಾ? ನಾವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಕ್ಕೆ ತಿಂಗಳಿಗೆ 5 ಸಾವಿರದಷ್ಟು ನೆರವು ನೀಡುತ್ತಿದ್ದೇವೆ. ಬಿಜೆಪಿಯವರು ನೆರವು ನೀಡಿದ್ದಾರಾ? ಅವರದ್ದು ಏನಿದ್ದರೂ ಖಾಲಿ ಮಾತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ದಾವಣಗೆರೆಯಲ್ಲಿ ಇಂದು (ಶುಕ್ರವಾರ ಏಪ್ರಿಲ್ 3) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನನಗೆ ಬಹಳ ಸಂತೋಷವಾಗಿದೆ. ನಾವು ಅವರಿಂದ ಕಲಿಯುವುದಿದೆ ಎಂದು ತಿಳಿಸಿದರು.

ಈ ಕ್ಷೇತ್ರದಲ್ಲಿ ನೂರಕ್ಕೆ 98% ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳಾಗಿದ್ದಾರೆ. ಸುಮಾರು 60 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಪಡೆಯುತ್ತಿದ್ದರೆ, 61 ಸಾವಿರ ಕುಟುಂಬಗಳು ಗೃಹಜ್ಯೋತಿ ಯೋಜನೆ ಪಡೆಯುತ್ತಿವೆ. 1.45 ಲಕ್ಷ ಜನ ಅನ್ನಭಾಗ್ಯ ಯೋಜನೆ ಫಲಾನುಭವಿಗಳಾಗಿದ್ದಾರೆ. ಅವರೆಲ್ಲರನ್ನು ಭೇಟಿ ಮಾಡಿದಾಗ, ಯಾರು ಏನಾದರೂ ಮಾಡಿಕೊಳ್ಳಲಿ ನಾವು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದಾಗಿ ಇಲ್ಲಿನ ಮಹಿಳೆಯರು ತೀರ್ಮಾನಿಸಿದ್ದಾರೆ ಎಂದರು.

ಶಾಮನೂರು ಶಿವಶಂಕರಪ್ಪ ಅವರು ಈ ಭಾಗದಲ್ಲಿ ಆಸ್ಪತ್ರೆ, ಸಭಾಂಗಣ, ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಿ ಸಹಾಯ ಮಾಡಿದ್ದಾರೆ. ನಾನು ಅನೇಕ ವರ್ತಕರನ್ನು ಭೇಟಿ ಮಾಡಿದ್ದು, ಅವರು ಶಿವಶಂಕರಪ್ಪ ಅವರ ನಾಯಕತ್ವದಲ್ಲಿ ನಮ್ಮ ವ್ಯಾಪಾರ ವ್ಯವಹಾರಕ್ಕೆ ಯಾವುದೇ ತೊಂದರೆ ಇರಲಿಲ್ಲ. ನಾನು ಈ ಕ್ಷೇತ್ರದ ಒಳಭಾಗಗಳಲ್ಲಿ ಪ್ರಚಾರಕ್ಕಾಗಿ ಸಂಚಾರ ಮಾಡಿದಾಗ, ಇಲ್ಲಿನ ರಸ್ತೆ, ಮನೆಗಳನ್ನು ನೋಡಿ ಬಹಳ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ ಎಂದು ಸಂತೋಷವಾಯಿತು. ಅಗಲವಾದ ರಸ್ತೆಗಳು, ಕಾಂಕ್ರೀಟ್ ರಸ್ತೆಗಳು, ಉದ್ಯಾನಗಳು, ಬಸ್ ನಿಲ್ದಾಣ ಸೇರಿದಂತೆ ಎಲ್ಲ ಪ್ರದೇಶಗಳನ್ನು ಬಹಳ ಉತ್ತಮವಾಗಿ ನಿರ್ವಹಣೆ ಮಾಡಿದ್ದಾರೆ. ಬೆಂಗಳೂರಿಗಿಂತ ಉತ್ತಮವಾಗಿ ಅಭಿವೃದ್ಧಿ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜಿಬಿಎ; 5 ಪಾಲಿಕೆಗಳ ಲೋಗೋ ಅನಾವರಣ

ಬಡವರಿಗೆ 15 ಸಾವಿರ ಆಶ್ರಯ ಮನೆಗಳನ್ನು ನೀಡಿದ್ದು, ಎಲ್ಲಾ ಸಮುದಾಯಗಳಿಗೆ ಪ್ರತ್ಯೇಕವಾಗಿ ಜಾಗ ನೀಡಿದ್ದು, ಇವರ ಕಾರ್ಯ ನೋಡಿ ನಾವು ಕಲಿಯಬೇಕಾದದ್ದು ಸಾಕಷ್ಟಿವೆ. ಕೋವಿಡ್ ಸಮಯದಲ್ಲಿ ಶಿವಶಂಕರಪ್ಪ ಅವರು ಉಚಿತ ಲಸಿಕೆ ನೀಡಿದ್ದನ್ನು ಎಲ್ಲರೂ ಸ್ಮರಿಸುತ್ತಿದ್ದಾರೆ. ಇದೆಲ್ಲವೂ ನಮಗೆ ಶಕ್ತಿ ನೀಡಿದೆ. ನಿನ್ನೆ ಸಮರ್ಥ ಅವರ ಭಾಷಣ ಕೇಳಿದೆ. ಅವರ ಮಾತು ಕೇಳಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿದ ಸಮಾಧಾನ ನಮಗಿದೆ. ಜನರು ಶಿವಶಂಕರಪ್ಪ ಅವರಿಗಿಂತ ಹೆಚ್ಚಿನ ಅಂತರದಲ್ಲಿ ಸಮರ್ಥ್ ಅವರನ್ನು ಗೆಲ್ಲಿಸುವ ವಿಶ್ವಾಸ ನಮಗಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಜಿಬಿಎ; 5 ಪಾಲಿಕೆಗಳ ಲೋಗೋ ಅನಾವರಣ
Next: ಸ್ವಚ್ಛತೆಗೆ ಇಡೀ ರಾಜ್ಯದಲ್ಲಿಯೇ 5ನೇ ಸ್ಥಾನ ಪಡೆದ ಕಲಬುರ್ಗಿ ಜಿಲ್ಲೆ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.