ಬೆಂಗಳೂರು: ಬೆಂಗಳೂರಿನ ಹೃದಯ ಭಾಗ ಎಂದು ಹೆಸರುವಾಸಿಯಾಗಿರುವ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಐದನೇ ವರ್ಷದ ಘಟಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.
ಈ ಘಟಿಕೋತ್ಸವಕ್ಕೆ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಬಿನಯ್ ಕುಮಾರ್ ದಾಸ್, DRDO ಮಹಾ ನಿರ್ದೇಶಕರು, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್ ಭಾಗಿಯಾಗಿದ್ದರು.
ಇನ್ನು ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 6 ಜನ ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ ಅರ್ಜುನ ಜನ್ಯ, ಕ್ರಿಕೆಟರ್ ವೆಂಕಟೇಶ್ ಪ್ರಸಾದ್. ಶಿಕ್ಷಣ ತಜ್ಞ, ಮಾಜಿ ಡಿಸಿಎಂ ಅಶ್ವಥ್ ನಾರಾಯಣ ತಂದೆ T.K.ನಾರಾಯಣಪ್ಪ, MLC ಡಾ. ಕೆ.ಗೋವಿಂದ್ ರಾಜ್, ಶಿಕ್ಷಣ ಕ್ಷೇತ್ರ ಮೋಹನ್ ಆಳ್ವಾ. ಕೈಗಾರಿಕೋದ್ಯಮಿ- ಮಾಜಿ MLC ಬಾವಾ ಮೊಹಮ್ಮದ್ ಫಾರೂಕ್‌ಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ನೀಡ ಗೌರವಿಸಿದರು.
ಅಲ್ಲದೆ ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ರ‍್ಯಾಂಕ್ ಸರ್ಟಿಫಿಕೇಟ್, ಚಿನ್ನದ ಪದಕ ಮತ್ತು ನಗದು ಬಹುಮಾನ ವಿತರಣೆ ಮಾಡಲಾಯಿತು. ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿ 37,370 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ, 23 Ph.D ವಿದ್ಯಾರ್ಥಿಗಳಿಗೆ Ph.D ಪ್ರದಾನ ಮಾಡಲಾಯಿತು. ಇದನ್ನೂ ಓದಿ: ಸ್ವಚ್ಛತೆಗೆ ಇಡೀ ರಾಜ್ಯದಲ್ಲಿಯೇ 5ನೇ ಸ್ಥಾನ ಪಡೆದ ಕಲಬುರ್ಗಿ ಜಿಲ್ಲೆ
ಈ ಸಂದರ್ಭದಲ್ಲಿ ಡಾ. ಮನಮೋಹನ್ ಸಿಂಗ್ ಬೆಂಗಳೂರಿನ ನಗರ ವಿಶ್ವವಿದ್ಯಾಲಯದ ಶಿಕ್ಷಕರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
