Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ: ಸಿಎಂ
  • Politics
  • State
  • ಬಾಗಲಕೋಟೆ

ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ: ಸಿಎಂ

Praja Vahini April 4, 2026 1 minute read
WhatsApp Image 2026-04-04 at 17.32.07
Spread the love

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ದಿಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಇಂದು (ಶನಿವಾರ ಏಪ್ರಿಲ್ 4) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ.

ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ  ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು.

ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ.  ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು.

ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಮೇಲೆ ಬಿಜೆಪಿ ಅಂದಿನಿಂದ ಇಂದಿನವರೆಗೆ ವಿರೋಧಿಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಎಲ್ಲರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕಳೆದ 3 ವರ್ಷಗಳಿಂದ ಗ್ಯಾರಂಟಿ ಯೋಚನೆಗಳು ಜಾರಿಯಲ್ಲಿದ್ದು 24/3/2026 ವರೆಗೆ 1.31 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ಇದನ್ನೂ ಓದಿ: ಕ್ರಿಕೆಟರ್ ವೆಂಕಟೇಶ್ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್

ಇದರ ಜೊತೆಗೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ವ್ಯವಸ್ಥೆಗೆ ವೆಚ್ಚ, ಎಸ್ ಸಿ ಎಸ್ ಪಿ/ ಟಿ ಎಸ್ ಪಿ ಯೋಜನೆಗಳಿಗೆ ವೆಚ್ಚ ಮಾಡುವುದನ್ನು ಕಡಿಮೆ ಮಾಡಿಲ್ಲ. ಕಳೆದ ವರ್ಷದಲ್ಲಿ 42,000 ಕೋಟಿ ವೆಚ್ಚ ಮಾಡಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳ್ಯಾವುವೂ ಕುಂಠಿತವಾಗಿಲ್ಲ ಎಂದರು.

ಬಿಜೆಪಿ ಅಪಪ್ರಚಾರ

ಸಿದ್ದರಾಮಯ್ಯ ಸಾಲ ಮಾಡಿದ್ದಾರೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆರ್ಥಿಕ ಹೊಣೆಗಾರಿಕೆ ಕಾಯ್ದೆಯನ್ನು ಬಿಜೆಪಿ ಸರಿಯಾಗಿ ಓದಿಕೊಳ್ಳಬೇಕು. ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿದ್ದಾಗ 2002 ರಲ್ಲಿ ಜಾರಿಯಾದ ಈ ಕಾಯ್ದೆಯ ಪ್ರಕಾರ ಮೂರು ಮಾನದಂಡಗಳನ್ನು ಈಡೇರಿಸಬೇಕು. ಆರ್ಥಿಕ ಕೊರತೆ ಜಿಡಿಪಿಯ ಶೇ 3% ಒಳಗಿರಬೇಕು.33 ಲಕ್ಷದ 5500 ಲಕ್ಷ ಕೋಟಿ ಪೈಕಿ 25% ಸಾಲವಿರಬೇಕು. ಬಿಜೆಪಿ ಮತ್ತೊಮ್ಮೆ ಬಜೆಟ್ ಪುಸ್ಕತ ಓದಿಕೊಳ್ಳಲಿ. ಜಿ ಡಿ ಪಿ ಐ ಶೇಕಡ 25ಕ್ಕಿಂತ ಸಾಲ ಹೆಚ್ಚಾಗಬಾರದು. ನಮ್ಮ ಸಾಲ 24.94 ರಲ್ಲಿದೆ. ಹೀಗಾಗಿ ಸಾಲ ಮಿತಿಮೀರಿಲ್ಲ.

ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ

ಯಾವುದೇ ರಾಜ್ಯ ಸಿಕ್ಕಾಪಟ್ಟೆ ಸಾಲ ಮಾಡಲು ಸಾಧ್ಯವಿಲ್ಲ. ಇಷ್ಟೇ ಸಾಲ ಕೂಡಬೇಕೆಂದು ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ನಿಗದಿ ಮಾಡುತ್ತದೆ. ಈ ವಿಷಯ ಬಿಜೆಪಿಗೆ ತಿಳಿದಿದೆಯೋ ಇಲ್ಲವೋ ಎನ್ನುವುದು  ಗೊತ್ತಿಲ್ಲ. ಸಾಲ ಮಾಡಿದ್ದೇನೆ ಎನ್ನುವುದು ಹಸಿ ಸುಳ್ಳು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಮೀರಿಲ್ಲ. ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕ್ರಿಕೆಟರ್ ವೆಂಕಟೇಶ್ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್
Next:  ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಡಿಕೆಶಿ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.