ರಾಮನಗರ: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಕೇಂದ್ರ ಮತ್ತು ರಾಜ್ಯದಲ್ಲೂ ಕೂಡ ಗ್ಯಾಸ್ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಕೂಡಲೇ ಗ್ಯಾಸ್ ಸಮಸ್ಯೆಯನ್ನು ಬಗೆಹರಿಸಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತಮಟೆ ಚಳುವಳಿ ನಡೆಸಿದ್ದಾರೆ.
ರಾಮನಗರದ ಐಜೂರು ವೃತ್ತದಲ್ಲಿ ಚಳುವಳಿ ನಡೆಸಿದ ಅವರು, ಗ್ಯಾಸ್ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳು ಉಪಚುನಾವಣೆಯಲ್ಲಿ ಮುಳುಗಿವೆ. ಆಟೋ ಚಾಲಕರು, ಹೋಟೆಲ್ ಮಾಲೀಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಇದನ್ನೂ ಓದಿ: ಬಾಗಲಕೋಟೆಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಬಿರುಸಿನ ಪ್ರಚಾರ
ನಿತ್ಯ ಬಂಕ್ ಮುಂದೆ ಆಟೋ ಚಾಲಕರು ಕಾದುಕಾದು ಸುಸ್ತಾಗಿದ್ದಾರೆ. ಇಷ್ಟಾದರೂ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಗ್ಯಾಸ್ ಸಮಸ್ಯೆ ಬಗೆಹರಿಸದಿದ್ರೆ ಆಟೋ ಚಾಲಕರ ಜೊತೆಗೂಡಿ ಬೃಹತ್ ಹೋರಾಟ ನಡೆಸುತ್ತೇವೆ ಎಂದು ಕಿಡಿಕಾರಿದ ವಾಟಾಳ್, ಯುದ್ಧದ ಸಮಯದಲ್ಲಿ ಐಪಿಎಲ್ ಪಂದ್ಯಾವಳಿಗೆ ಆಯೋಜನೆಗೆ ಕಿಡಿಕಾರಿದ್ದಾರೆ.
