Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಪಚುನಾವಣೆ: ಯಾರ ಕೈ ಹಿಡಿತಾರೆ ಮತದಾನ ಬಾಂಧವರು?
  • Bangalore
  • Politics
  • State

ಉಪಚುನಾವಣೆ: ಯಾರ ಕೈ ಹಿಡಿತಾರೆ ಮತದಾನ ಬಾಂಧವರು?

Praja Vahini April 9, 2026
WhatsApp Image 2026-04-09 at 13.20.46
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ಬಾರಿ ಉಪಚುನಾವಣೆಯಲ್ಲಿ ಶತಾಯಗತಾಯ ಹೇಗಾದ್ರು ಮಾಡಿ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಚುನಾವಣೆ ದಿನಾಂಕ (ಮಾರ್ಚ್‌15) ಘೋಷಣೆ ಯಾದಾಗಲಿಂದಲೂ ಹಗಲು ರಾತ್ರಿ ಎನ್ನದೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕೈಗೊಂಡಿದ್ದಾರೆ.

ಅಲ್ಲದೆ ಬಿಜೆಪಿ ಪಕ್ಷದಲ್ಲೂ ಕೂಡ ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದರು.

ಹೌದು, ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಇನ್ನು ಈ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಪುಟ ಸಚಿವರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಾಗಲಕೋಟೆಯಲ್ಲಂತೂ ಸಿದ್ದರಾಮಯ್ಯನವರೇ ಖುದ್ದು ನಾಲ್ಕೈದು ದಿನ ಪ್ರಚಾರ ನಡೆಸಿದ್ದಾರೆ. ಇದನ್ನೂ ಓದಿ: ನಿಮಗೆ ಮಾನಸಿಕ ಆರೋಗ್ಯ ಕೆಟ್ಟಿದೆಯಾ? ಮಲ್ಲಿಕಾರ್ಜುನ ಖರ್ಗೆಯವರಿಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಇಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮತದಾನ ಬಾಂಧವರು ಯಾರ ಕೈಹಿಡಿತಾರೆ ಎಂದು ಕಾದು ನೋಡಬೇಕಿದೆ.

About the Author

Praja Vahini

Editor

View All Posts

Spread the love

Post navigation

Previous: ನಿಮಗೆ ಮಾನಸಿಕ ಆರೋಗ್ಯ ಕೆಟ್ಟಿದೆಯಾ? ಮಲ್ಲಿಕಾರ್ಜುನ ಖರ್ಗೆಯವರಿಗೆ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
Next: ತಮಿಳುನಾಡು ದೇಶದಲ್ಲೇ ವೈಶಿಷ್ಟ ರಾಜ್ಯವಾಗಿದೆ: ಡಿಕೆಶಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.