ಚಿಕ್ಕಮಗಳೂರು: ಸಾಮಾನ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮ ಪತ್ನಿ ಅಷ್ಟಾಗಿ ಎಲ್ಲೂ ಕೂಡ ಸಾರ್ವಜನಿಕವಾಗಿ ಕಾಣಿಸುವುದಿಲ್ಲ. ಅದರಲ್ಲೂ ಕೂಡ ಸಿಎಂ ಸಿದ್ದರಾಮಯ್ಯ ಅವರ ಜೊತೆಯಂತೂ ಎಲ್ಲೂ ಕೂಡ ಕಾಣಿಸಿಕೊಂಡಿಲ್ಲ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಕಾಫಿ ನಾಡಿನಲ್ಲಿ ಟೆಂಪಲ್ ರನ್ ನಡೆಸಿದ್ದಾರೆ. ನಿನ್ನೆ (ಭಾನುವಾರ ಏಪ್ರಿಲ್ 12) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ನಾಡಿನಲ್ಲಿ ಹಲವಾರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
ಜೊತೆಗೆ ಸಿಎಂ ಧರ್ಮಪತ್ನಿಯವರು ಕೂಡ ನಿನ್ನೆ ಕಾಫಿ ನಾಡಿನಲ್ಲಿ ಹಲವಾರು ದೇವಾಲಯಗಳಿಗೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರದಲ್ಲಿ ಸಿಎಂ ಹಾಗೂ ಸಿಎಂ ಪತ್ನಿ ವಾಸ್ತವ್ಯ ಹೂಡಿದ್ದಾರೆ. ನಿನ್ನೆ ಮಧ್ಯಾಹ್ನ 3 ಗಂಟೆಗೆ ಪಾರ್ವತಿ ಅವರು ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದು, ಬಳಿಕ ಶೃಂಗೇರಿಗೆ ತೆರಳಿ ಶಾರದಾಂಭೆಗೆ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಣ್ಮನ ಸೆಳೆದ ಪತ್ರಕರ್ತರ 40ನೇ ಸಮ್ಮೇಳನ
ಪೂಜೆ ಬಳಿಕ ಶಾರದಾಂಬೆ ದೇಗುಲದ ಮಠದಲ್ಲೇ ವಾಸ್ತವ್ಯ ಹೂಡಿದ್ದರು. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ-ಶೃಂಗೇರಿ ತಾಲೂಕಿನಲ್ಲಿಂದು 38 ಕೋಟಿ ರೂ. ವೆಚ್ಚದ ಸೇತುವೆ ಹಾಗೂ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಸಿಎಂ ದಂಪತಿ ವಾಪಸ್ಸಾಗಲಿದ್ದಾರೆ.
