Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದೇನೆ: ಸಿಎಂ
  • Bangalore
  • Politics
  • State

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದೇನೆ: ಸಿಎಂ

Praja Vahini April 14, 2026 1 minute read
Thumbnail for website
Spread the love

ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ. ಇದಕ್ಕಾಗಿ ಅಂಬೇಡ್ಕರರಿಗೆ ನಾನು ಋಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನಸೌಧದಲ್ಲಿ ಇಂದು (ಮಂಗಳವಾರ ಏ. 14) ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗದೆ ಇರುವುದು ನೋವಿನ ಸಂಗತಿ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು, “ಜಾತಿ ವ್ಯವಸ್ಥೆ ಇರುವವರೆಗೂ ಅಸ್ಪೃಶ್ಯತೆ ಇರುತ್ತದೆ, ಸಾಮಾಜಿಕ, ಆರ್ಥಿಕ ಅಸಮಾನತೆ ಇರುವವರೆಗೆ ಜಾತೀಯತೆ ಇರಲಿದೆ” ಎಂದು ಸ್ಪಷ್ಟವಾಗಿ ಹೇಳಿದ್ದರು.

ಅಂಬೇಡ್ಕರ್ ಅವರು ಎಲ್ಲಾ ದಮನಿತರ, ಪರಿಶಿಷ್ಟ ವರ್ಗಗಳ, ಶೋಷಿತರ, ಅವಕಾಶ ವಂಚಿತ ಜನರ ಪರವಾಗಿ ಹೋರಾಟವನ್ನು ತಮ್ಮ ಜೀವನದುದ್ದಕ್ಕೂ ಮಾಡಿದ್ದರು. ಕೇವಲ ದಲಿತರ ನಾಯಕರಾಗಿರದೆ ಅವಕಾಶ ವಂಚಿತರ, ದೌರ್ಜನ್ಯಕ್ಕೆ ಒಳಗಾದ ಎಲ್ಲರ ಪರವಾಗಿ ಹೋರಾಟ ಮಾಡಿದ್ದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಆದ್ದರಿಂದಲೇ ಭಾರತದ ಸಂವಿಧಾನವನ್ನು ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠ ಎಂದು ಪರಿಗಣಿಸಲಾಗುತ್ತದೆ.

ಅಂಬೇಡ್ಕರ್ ವಿದ್ವಾಂಸರಾಗಿದ್ದರೂ ದಮನಿತರ ಪರವಾಗಿ ಹೋರಾಡಿದರಲ್ಲದೆ, ಹಿಂದೂ ಧರ್ಮದ ಸುಧಾರಣೆಗಾಗಿ ಬಹಳ ಪ್ರಯತ್ನ ಮಾಡಿದರು. ಆದರೆ ಕಡೆಗೂ ಅದು ಕೈಗೂಡದೆ ಹಿಂದೂ ಧರ್ಮವನ್ನು ತ್ಯಜಿಸಿದರು.

ಅಂಬೇಡ್ಕರ್ ಅವರು ವಿದ್ಯಾವಂತರಾಗದೆ ಹೋಗಿದ್ದರೆ, ಅವರಲ್ಲಿ ಹೋರಾಟದ ಮನೋಭಾವ ಇರದೇ ಹೋಗಿದ್ದರೆ ಇಂಥ ಸಂವಿಧಾನ ಸಿಗಲು ನಮಗೆ ಸಾಧ್ಯವಿರಲಿಲ್ಲ. ಅದಕ್ಕಾಗಿಯೇ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂಬೇಡ್ಕರ್, ರಾಮ್ ಮನೋಹರ್ ಲೋಹಿಯಾ, ಜವಾಹರ್ ಲಾಲ್ ನೆಹರೂ ಅವರು ಪಡೆದಂತಹ ಶಿಕ್ಷಣ ಪಡೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ, ಮಾನವೀಯತೆಯಿಂದ ಕೂಡಿರುವ ಶಿಕ್ಷಣ ನಮಗೆ ಸಿಗಬೇಕು. ಇದನ್ನೂ ಓದಿ: ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್

ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದರಿಂದಲೇ ಇಂಥ ಸಂವಿಧಾನ ನೀಡಲು ಅಂಬೇಡ್ಕರ್ ಅವರಿಗೆ ಸಾಧ್ಯವಾಯಿತು. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾಜಿಕ, ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದು, ಸಮ ಸಮಾಜ ನಿರ್ಮಾಣಕ್ಕೆ ಸರ್ಕಾರ ಮಾಡುತ್ತಿರುವ ಪ್ರಾಮಾಣಿಕ ಪ್ರಯತ್ನವಾಗಿದೆ ಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಬೇಸಿಗೆಯಲ್ಲಿ ಹೆಚ್ಚಾಗಿ ಟೀ ಕುಡಿತೀರಾ? ಹಾಗಾದ್ರೆ ನಿಮ್ಮ ದೇಹ ಡ್ಯಾಮೇಜ್ ಆಗೋದು ಗ್ಯಾರಂಟಿ!
Next: ಯಾವುದೇ ಪಕ್ಷ ಆಗಲಿ ಪಕ್ಷಕ್ಕೆ ಶಿಸ್ತು ಮುಖ್ಯ, ಜಮೀರ್ ಶಿಸ್ತು ಪಾಲಿಸಿಲ್ಲ: ಡಿಸಿಎಂ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.