Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಕ್ಕಳಿಗೆ ಒತ್ತಡದ ಶಿಕ್ಷಣಕ್ಕಿಂತ ಅವರ ಆಸಕ್ತಿಗೆ ಅನುಸಾರ ವಿದ್ಯಾಭ್ಯಾಸ ಮಾಡಿಸುವುದು ಉತ್ತಮ
  • State
  • ಗದಗ

ಮಕ್ಕಳಿಗೆ ಒತ್ತಡದ ಶಿಕ್ಷಣಕ್ಕಿಂತ ಅವರ ಆಸಕ್ತಿಗೆ ಅನುಸಾರ ವಿದ್ಯಾಭ್ಯಾಸ ಮಾಡಿಸುವುದು ಉತ್ತಮ

Praja Vahini April 19, 2026 1 minute read
WhatsApp Image 2026-04-19 at 21.21.57
Spread the love

ಗದಗ: ಅಂಕ ಆಧಾರಿತ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸುವುದು ಗುರುವಿನ ಕಾರ್ಯ. ಗದಗ ನಗರದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಭವಿಷ್ಯ ರೂಪಿಸುವಲ್ಲಿ ಚಿಕ್ಕಟ್ಟಿ ಶಿಕ್ಷಣ ಸಮೂಹ ಸಂಸ್ಥೆ ಶ್ರಮಿಸುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಮಾನ್ಯಶ್ರೀ ಎಸ್.ವಿ.ಸಂಕನೂರು ಶ್ಲಾಘಿಸಿದರು.

ಗದಗ ನಗರದ ವಿನಯ/ಬಿಪಿನ್ ಚಿಕ್ಕಟ್ಟಿ ಕಾಲೇಜು ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, ಮಕ್ಕಳಿಗೆ ಒತ್ತಡದ ಶಿಕ್ಷಣಕ್ಕಿಂತ ಅವರ ಆಸಕ್ತಿಗೆ ಅನುಸಾರ ವಿದ್ಯಾಭ್ಯಾಸ ಮಾಡಿಸುವುದು ಉತ್ತಮ. ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಈ ಶಿಕ್ಷಣ ಸಂಸ್ಥೆ ಹೊಂದಿದೆ. ಪ್ರತಿ ವಿದ್ಯಾರ್ಥಿಯ ಬೆಳವಣಿಗೆಯಲ್ಲಿ ಶಿಕ್ಷಕರ ಮತ್ತು ಪಾಲಕರ ಪಾತ್ರ ಬಹುಮುಖ್ಯ. ಸತತ ಪರಿಶ್ರಮದಿಂದ ಸಾಧನೆ ಸಾಧ್ಯ. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಹಾಗೂ ಇತರ ವಿದ್ಯಾರ್ಥಿಗಳಿಗೆ ಸ್ಫೂರ್ತಿದಾಯಕ ಎಂದು ಅವರು ನುಡಿದರು.

ಚಿಕ್ಕಟ್ಟಿ ಶಿಕ್ಷಣ ಸಮೂಹ ಸಂಸ್ಥೆಯ ಸಂಸ್ಥಾಪಕ ಹಾಗೂ ಕಾರ್ಯಕ್ರಮದ ಅಧ್ಯಕ್ಷರಾದ ಪ್ರೊ. ಎಸ್.ವ್ಹಾಯ್. ಚಿಕ್ಕಟ್ಟಿ ಮಾತನಾಡಿ, “ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆದು ಉತ್ತಮ ಸಾಧನೆ ಮಾಡಿರುವುದು ಖುಷಿಯ ಸಂಗತಿ. ಸುಮಾರು 43 ವರ್ಷಗಳಿಂದ ನಮ್ಮ ಸಂಸ್ಥೆಯು ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮತ್ತು ಬದುಕು ರೂಪಿಸುವಲ್ಲಿ ಶ್ರಮಿಸುತ್ತಿದೆ. ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವುದರಿಂದ ಉಳಿದ ವಿದ್ಯಾರ್ಥಿಗಳಲ್ಲೂ ಓದಿನ ಆಸಕ್ತಿ ಹೆಚ್ಚುತ್ತದೆ” ಎಂದರು.

ಸಾಧಕ ವಿದ್ಯಾರ್ಥಿನಿಯರಾದ ನಿಸರ್ಗ ವಸ್ತ್ರದ – 97.50%

ಸಫಿಯಾ ಅಣ್ಣಿಗೇರಿ 96.50%

,ಸಾಯದಾ ಎಸ್. ಬಿ. 93.00%

, ಪ್ರೀತಿ ಯಳವತ್ತಿ* – 92.17%

ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ  ಪ್ರೊ. ಎನ್. ವಿ. ಜೋಶಿ, ಡಾ. ಬಿಪಿನ್ ಎಸ್. ಚಿಕ್ಕಟ್ಟಿ, ಪ್ರಾಚಾರ್ಯರು ಪದವಿ ಕಾಲೇಜು, ಪ್ರೊ. ಬಿ. ವಿ. ಜೋಶಿ ಆಪ್ತ ಸಹಾಯಕರು, ಶ್ರೀ. ಎಂ. ಆರ್. ಅಂಗಡಿ (ಶಿಕ್ಷಕರು), ಶ್ರೀ. ಎಸ್. ಎ. ಹಿರೇಮಠ (ಶಿಕ್ಷಕರು), ಶ್ರೀಮತಿ. ಶೋಭಾ. ಎಸ್. ಸ್ಮಾವರಮಠ (ಉಪಪ್ರಾಚಾರ್ಯರು), ಶ್ರೀಮತಿ. ರಿಯಾನ. ಮುಲ್ಲಾ (ಉಪಮುಖ್ಯೋಪಾಧ್ಯಾಯಿನಿ), ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮುಖಭಂಗವಾಗಿದೆ: ಡಿ.ಕೆ. ಶಿವಕುಮಾರ್
Next: ಜಿಲ್ಲೆಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ

Views:

52

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.