ಬೆಂಗಳೂರು: ಅದೇನೋ ಗೊತ್ತಿಲ್ಲ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಶನಿ ಕಾಟ ಹೆಚ್ಚಾಗಿ ಕಾಡುತ್ತಿದ್ದು, ಇದೀಗ ಕಾಂಗ್ರೆಸ್ ನ ಶಾಸಕ ಎನ್ಎ ಹ್ಯಾರಿಸ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಹೌದು, ಇಂದು ಬೆಳ್ಳಂಬೆಳಗ್ಗೆ ಕಾಂಗ್ರೆಸ್ನ ಶಾಸಕ ಎನ್ಎ ಹ್ಯಾರಿಸ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಇಂಚು ಚಿಂಚಾಗಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಇಡಿ ದಾಳಿಗೆ ಪ್ರಮುಖ ಕಾರಣ ಎಂದರೆ, ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಅವರು ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ವ್ಯವಹಾರ ಇಟ್ಟುಕೊಂಡಿದ್ದರು ಎಂಬ ಕಾರಣಕ್ಕೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಿಟ್ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇ.ಡಿ ರೇಡ್ ಮಾಡಿದೆ. ಶ್ರೀಕಿ ಜೊತೆ ನಲಪಾಡ್ ಆರ್ಥಿಕ ವ್ಯವಹಾರ ಇಟ್ಟುಕೊಂಡಿದ್ದರು.
ಶ್ರೀಕಿ ಜೊತೆ ನಲಪಾಡ್ 6 ವರ್ಷದ ಆರ್ಥಿಕ ವ್ಯವಹಾರ ಹೊಂದಿದ್ದರು. ಇಬ್ಬರೂ ಸೇರಿ 4.5 ಕೋಟಿ ರೂ. ವಹಿವಾಟು ನಡೆಸಿದ್ದರು ಎನ್ನಲಾಗಿದೆ.
