Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಂಗ್ರೆಸ್‌ 2 ತಿಂಗಳ ಗ್ರಹಲಕ್ಷ್ಮಿ ಹಣವನ್ನ ಉಪಚುನಾವಣೆ ಬಳಸಿದೆ: ಬಿವೈವಿ ಆರೋಪ
  • Bangalore
  • Politics
  • State

ಕಾಂಗ್ರೆಸ್‌ 2 ತಿಂಗಳ ಗ್ರಹಲಕ್ಷ್ಮಿ ಹಣವನ್ನ ಉಪಚುನಾವಣೆ ಬಳಸಿದೆ: ಬಿವೈವಿ ಆರೋಪ

Praja Vahini April 22, 2026 1 minute read
WhatsApp Image 2026-04-22 at 13.25.07
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಹಣಗಳನ್ನ ಉಪಚುನಾವಣೆಗೆ ಬಳಸಿಕೊಳ್ಳುವುದರ ಜೊತೆಗೆ 5 ಲಕ್ಷ ಸರಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರು ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಈ ಕುರಿತು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ರಾಜ್ಯ Indian National Congress – Karnataka ಸರ್ಕಾರದ ದುರಾಡಳಿತ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕ ನೀತಿಗಳ ವೈಫಲ್ಯ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿರುವ ಪರಿಣಾಮವಾಗಿ ರಾಜ್ಯದ ಸರಿಸುಮಾರು 5 ಲಕ್ಷ ಸರಕಾರಿ ನೌಕರರ ಪೈಕಿ ಬಹುತೇಕ ನೌಕರರಿಗೆ ಏಪ್ರಿಲ್ ತಿಂಗಳ 22 ರವರೆಗೆ ರಾಜ್ಯ ಸರ್ಕಾರ ಸಂಬಳವನ್ನೇ ನೀಡಿಲ್ಲ.

ಕಳೆದ ವರ್ಷ ಎರಡು ತಿಂಗಳ ಅವಧಿಗೆ ಗ್ರಹಲಕ್ಷ್ಮಿ ಹಣವನ್ನೇ ನುಂಗಿ ಹಾಕಿದ ರಾಜ್ಯ ಸರ್ಕಾರ ಈ ವರ್ಷ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಇದನ್ನೂ ಓದಿ: ತೆಂಗಿನ ನಾರಿನ ಮ್ಯಾಟ್‌ಗಳು ಮತ್ತು ಇತರೆ ಉತ್ಪನ್ನಗಳು ದೆಹಲಿಗೆ ಸರಬರಾಜು: ಸಿಎಂ

ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ, ಮುಸ್ಲಿಮರ ತುಷ್ಟಿಕರಣ ಹೀಗೆ ಹಲವು ಆಂತರಿಕ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ Siddaramaiah ಹಾಗೂ ಉಪಮುಖ್ಯಮಂತ್ರಿ DK Shivakumar ವೈಯಕ್ತಿಕ ಪ್ರತಿಷ್ಠೆಯಲ್ಲಿ ಮುಳುಗಿ ಹೋಗಿದ್ದಾರೆ. ಇದರ ನೇರ ಪರಿಣಾಮ ರಾಜ್ಯದ ಜನರ ಮೇಲೆ ಉಂಟಾಗುತ್ತಿದೆ.

ಸರ್ಕಾರಿ ನೌಕರರಿಗೆ ಸಂಬಳವನ್ನೇ ಕೊಡಲು ಸಾಧ್ಯವಾಗದ ಈ ಸರಕಾರ ಈ ವರ್ಷ ಬಿರು ಬೇಸಿಗೆ ಹಾಗೂ ಬರದ ಛಾಯೆಯಲ್ಲಿ ಈಗಾಗಲೇ ಬಸವಳಿದು ಹೋಗಿರುವ ರಾಜ್ಯದ ಜನರನ್ನು ದೇವರೇ ಕಾಪಾಡಬೇಕು.

ಪ್ರತಿಪಕ್ಷವಾಗಿ ಬಿಜೆಪಿ ಸರ್ಕಾರವನ್ನು ಬಡಿದೆಬ್ಬಿಸಿ ಕುಡಿಯುವ ನೀರಿಗೂ ಪರಿತಪಿಸುತ್ತಿರುವ ಜನ, ಜಾನುವಾರು ನೆರವಿಗೆ ಮುಂದಾಗುವಂತೆ ಹೋರಾಟ ನಡೆಸಲು ಬದ್ಧವಾಗಿದೆ ಎಂದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ತೆಂಗಿನ ನಾರಿನ ಮ್ಯಾಟ್‌ಗಳು ಮತ್ತು ಇತರೆ ಉತ್ಪನ್ನಗಳು ದೆಹಲಿಗೆ ಸರಬರಾಜು: ಸಿಎಂ
Next: ವೈದ್ಯರ ನಿರ್ಲಕ್ಷ್ಯ-ಮರ್ಮಾಂಗದ ಭಾದೆ ತಾಳಲಾರದೆ ವ್ಯಕ್ತಿ ಸಾವು

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.