ಶಹಾಪುರ: ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ 9ನೇ ರಾಜ್ಯ ಸಮ್ಮೇಳನವು ದಿ.26 ರಿಂದ 28 ರವರೆಗೆ ನಗರದ ಸಿ.ಪಿ.ಎಸ್ ಶಾಲಾ ಮೈದಾನದಲ್ಲಿ ಬಹಿರಂಗ ಸಭೆ ಜರುಗಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಕಾರ್ಮಿಕರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ಅಧ್ಯಕ್ಷ ಎಂ. ಪುಟ್ಟುಮಾಧು ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಕರ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಾಜಿ ರಾಜ್ಯ ಸಭಾ ಸದಸ್ಯರು, ನವದೆಹಲಿಯ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಎ. ವಿಜಯರಾಘವನ್ ಬಹಿರಂಗ ಸಭೆ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವೆಂಕಟ್, ಕೇರಳಂ ಜಂಟಿ ಕಾರ್ಯದರ್ಶಿ ವಿ. ಶಿವದಾಸನ್, ಬೆಂಗಳೂರು ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ, ರಾಜ್ಯಧ್ಯಕ್ಷ ಯು.ಬಸವರಾಜ್ ರಾಜ್ಯ ಉಪಾಧ್ಯಕ್ಷ ಜಿ.ಎಸ್ ನಾಗರಾಜ್, ಸ್ವಾಗತ ಸಮಿತಿ ಅಧ್ಯಕ್ಷ ಹಣಮೇಗೌಡ, ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕು ಎಂದರು.
ರಾಜ್ಯ ಸಮ್ಮೇಳನದಲ್ಲಿ ವಿಶೇಷವಾಗಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ ಪುನರ್ ಸ್ತಾಪನೆಗಾಗಿ ಮತ್ತು ವಿಬಿಜಿ ಗ್ರಮ್ ಜಿ ರದ್ದತಿಗಾಗಿ ಸಮ್ಮೆಳನದಲ್ಲಿ ಚರ್ಚೆ ನಡೆಯಲಿದೆ. ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಮ್ಮೇಳನದಲ್ಲಿ ಸರ್ಕಾರದ ಗಮನಕ್ಕೆ ತಂದು ರೈತರ ಪೂರಕವಾದ ಆಡಳಿತ ನಡೆಸಲು ಸರ್ಕಾರ ಮುಂದಾಗಲು ಮನವಿ ಮಾಡಲಾಗುವುದು ಎಂದರು. ಇದನ್ನೂ ಓದಿ: ಸಚಿವ ಡಿ ಸುಧಾಕರ್ ಅವರ ಆರೋಗ್ಯದ ಬಗ್ಗೆ ಸಿಎಂ ಹೇಳಿದ್ದೇನು?
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೆರಾ, ರೈತ ಮುಖಂಡರಾದ ಚೆನ್ನಪ್ಪ ಆನೇಗುಂದಿ, ದವಲಾಸಾಬ್ ನದಾಫ್, ಎಸ್.ಎಂ ಸಾಗರ, ಭೀಮರಾಯ ಪೂಜಾರಿ ಸೇರಿದಂತೆ ಇತರರು ಇದ್ದರು.
