ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಒಳಮೀಸಲಾತಿ ಕುರಿತಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿರ್ಧಾರವನ್ನು ಇದೀಗ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.
ನಗರದಲ್ಲಿ ಇಂದು ಶನಿವಾರ ಏಪ್ರಿಲ್ 25ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳಮೀಸಲಾತಿ ನಿರ್ಧಾರವು ಕೇವಲ ಕಣ್ಣೊರೆಸು ಕ್ರಮವಾಗಿದ್ದು, ಇದರಿಂದ ದಲಿತ ಸಮುದಾಯಗಳಿಗೆ ನ್ಯಾಯ ದೊರೆಯುವುದಿಲ್ಲ. ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ‘ಜನರಲ್ ಎಸ್ಸಿ’ ಎಂದು ವರ್ಗೀಕರಿಸುವುದು ಒಳಮೀಸಲಾತಿಯ ಅರ್ಥವಲ್ಲ ಎಂದು ಹೇಳಿದರು. ಇದು ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾತ್ರ ಎಂದು ಆರೋಪಿಸಿದರು. ಇದನ್ನೂ ಓದಿ: ಸ್ಥಳೀಯ ನಾಯಿ ಮರಿ ದತ್ತು ಸ್ವೀಕಾರ ಮೇಳ
ಒಳಮೀಸಲಾತಿ ಜಾರಿಗೆ ಸರ್ಕಾರ 3 ವರ್ಷ ತೆಗೆದುಕೊಂಡಿರುವುದು ಪ್ರಶ್ನಾರ್ಹ. ಈ ನಿರ್ಧಾರವನ್ನು ಕೆಲವೇ ತಿಂಗಳಲ್ಲಿ ಜಾರಿಗೆ ತರುವುದು ಸಾಧ್ಯವಾಗಿತ್ತು. Gen Z ಹೋರಾಟಗಾರರ ಒತ್ತಡದಿಂದ ಪಾರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಟೀಕಿಸಿದರು.
