ಬೆಂಗಳೂರು: 2026 ನೇ ಸಾಲಿನಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಕೆಇಎ ಪರೀಕ್ಷ ಸಂಸ್ಥೆಯು ಕೀ ಉತ್ತರವನ್ನು ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಹೌದು, ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಇದೇ ತಿಂಗಳು ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ಬರೆದಿದ್ದು, ಕೆಇಎ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಸಿಇಟಿ ಪರೀಕ್ಷೆಯ ಕೀ ಉತ್ತರವನ್ನು ಪ್ರಕಟಿಸಿದೆ.
ಇನ್ನು ಈ ಕೀ ಉತ್ತರಗಳಿಗೆ ಆಕ್ಷೇಪಣೆಗಳು ಏನಾದರು ಇದ್ದರೆ ಏ.30ರೊಳಗೆ ಸಲ್ಲಿಸಬೇಕು. ಇದಕ್ಕೆ ಆನ್ಲೈನ್ ಲಿಂಕ್ ಕೂಡ ಬಿಡುಗಡೆ ಮಾಡಿದ್ದು, ಆಕ್ಷೇಪಣೆಗಳ ಜೊತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು ಎಂದು ಕೆಇಎ ತಿಳಿಸಿದೆ. ಇದನ್ನೂ ಓದಿ: ಡಾ. ರಾಜಕುಮಾರ್ ಸಮಾದಿ ವಿವಾದ-ನಾನು ದಬ್ಬಾಳಿಕೆಯನ್ನು ಒಪ್ಪಲ್ಲ: ನಟ ಚೇತನ್
ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. ಈ ವಿಚಾರದಲ್ಲಿ ವಿಷಯ ತಜ್ಞರು ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಕೆಇಎ ಮಾಹಿತಿ ನೀಡಿದೆ.
