ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಪಂದ್ಯ ನಡೆಯುವಾಗಲೇ ಭಾರಿ ಭದ್ರತಾ ಲೋಪ ಕಂಡು ಬಂದಿದೆ ಎಂದು ತಿಳಿದುಬಂದಿದೆ.
ಹೌದು, ಏಪ್ರಿಲ್ 24ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಮ್ಸ್ ತಂಡಗಳ ಮಧ್ಯೆ ಪಂದ್ಯ ಆಯೋಜಿಸಲಾಗಿತ್ತು. ಈ ಪಂದ್ಯ ನಡೆಯುವಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಂಕಕಾರಿ ಘಟನೆ ನಡೆದಿರುವುದು ತಡವಾಗಿ ಬಳಕೆಗೆ ಬಂದಿದೆ.
ಐಪಿಎಲ್ ಪಂದ್ಯ ನಡೆಯುವ ದಿನದಂದೇ ಕ್ರೀಡಾಂಗಣದ ಪ್ರಮುಖ ಭದ್ರತಾ ವ್ಯವಸ್ಥೆಯಾದ ಸಿಸಿಟಿವಿ ಕ್ಯಾಮೆರಾಗಳ ಕೇಬಲ್ಗಳನ್ನು ಕತ್ತರಿಸಿ, ಇಡೀ ಭದ್ರತಾ ಜಾಲವನ್ನೇ ಅಸ್ತವ್ಯಸ್ತಗೊಳಿಸಲು ಯತ್ನಿಸಲಾಗಿದೆ.
ಇನ್ನು ಪಂದ್ಯ ನಡೆಯುವ ದಿನದಂದು ಬೆಳಿಗ್ಗೆ ಕ್ರೀಡಾಂಗಣದ ತಾಂತ್ರಿಕ ತಂಡವು ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಬರೋಬ್ಬರಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು ಆಫ್ಲೈನ್ ಆಗಿರುವುದು ಪತ್ತೆಯಾಗಿದೆ.ಕ್ಯಾಮೆರಾಗಳು ಏಕಾಏಕಿ ಬಂದ್ ಆಗಿದ್ದರಿಂದ ತಾಂತ್ರಿಕ ತಂಡವು ತಕ್ಷಣವೇ ಕೂಲಂಕಷವಾಗಿ ತನಿಖೆ ನಡೆಸಿದೆ.
ಈ ವೇಳೆ ಐವಿಎಸ್ ಡಿಜಿಟಲ್ ಸೊಲ್ಯೂಷನ್ಸ್ ಎಂಬ ಉಪ-ವಿತರಕ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಇ. ಮತ್ತು ಅಬ್ದುಲ್ ಕಲಾಂ ಈ ವಿಧ್ವಂಸಕ ಕೃತ್ಯದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ. ಈ ಇಬ್ಬರು ಆರೋಪಿಗಳು ಕ್ರೀಡಾಂಗಣವನ್ನು ಪ್ರವೇಶಿಸಲು ಅಗತ್ಯವಾದ ಮಾನ್ಯ ಪಾಸ್ಗಳನ್ನು ಹೊಂದಿರಲಿಲ್ಲ. ಆದರೂ ಇಬ್ಬರು ಬೆಳಿಗ್ಗೆ 11:30ರ ಸುಮಾರಿಗೆ ನಿಷ್ಕ್ರಿಯಗೊಂಡ ಹಳೆಯ ಕಾರ್ಡ್ ಬಳಸಿಕೊಂಡು ಕ್ರೀಡಾಂಗಣವನ್ನು ಅನಧಿಕೃತವಾಗಿ ಪ್ರವೇಶಿಸಿದ್ದರು.
ಇವರು ಎನ್ವಿಆರ್ ಮತ್ತು ಆಪ್ಟಿಕಲ್ ಫೈಬರ್ ಸಂಪರ್ಕಗಳನ್ನು ಉದ್ದೇಶಪೂರ್ವಕವಾಗಿ ತಪ್ಪು ತಪ್ಪಾಗಿ ನಿರ್ವಹಿಸಿ ಅವುಗಳನ್ನು ಕತ್ತರಿಸಿ ಹಾನಿಗೊಳಿಸಿದ್ದಾರೆ. ಇದರಿಂದಾಗಿ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಂಡಿತ್ತು. ಇದನ್ನೂ ಓದಿ: ಇಂದು ನಡೆಯಲಿರುವ ಐಪಿಎಲ್ ಪದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ಪ್ರಮುಖ ಸ್ಥಳಗಳ ಕ್ಯಾಮೆರಾಗಳು ಬಂದ್ ಆಗಿದ್ದರಿಂದ ಪಂದ್ಯದ ಸಂದರ್ಭದಲ್ಲಿ ಭದ್ರತಾ ಮೇಲ್ವಿಚಾರಣೆ ನಡೆಸಲು ಪೊಲೀಸರಿಗೆ ಅಗತ್ಯವಾದ ದತ್ತಾಂಶ ಅಥವಾ ಫೀಡ್ಗಳನ್ನು ಒದಗಿಸಲು ದೂರುದಾರರಿಗೆ ಸಾಧ್ಯವಾಗಲಿಲ್ಲ.
ಸುಮಾರು 2040 ಸಿಸಿಟಿವಿ ಕೇಬಲ್ಗಳ ಕಟ್ ಮಾಡಿದ್ದ ಆರೋಪಿಗಳ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
