Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆಎಸ್‌ಡಿಎಲ್ ವಹಿವಾಟಿನಲ್ಲಿ ಮಹಾದಾಖಲೆ: ಎಂ ಬಿ ಪಾಟೀಲ
  • Bangalore
  • Politics
  • State

ಕೆಎಸ್‌ಡಿಎಲ್ ವಹಿವಾಟಿನಲ್ಲಿ ಮಹಾದಾಖಲೆ: ಎಂ ಬಿ ಪಾಟೀಲ

Praja Vahini April 28, 2026 1 minute read
WhatsApp Image 2026-04-28 at 14.56.41
Spread the love

ಬೆಂಗಳೂರು: ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆ.ಎಸ್.ಡಿ.ಎಲ್) 2025-26ನೇ ಹಣಕಾಸು ವರ್ಷದಲ್ಲಿ ಇದೇ ಮೊದಲ ಬಾರಿಗೆ 2,016 ಕೋಟಿ ರೂ. ವಹಿವಾಟು ನಡೆಸಿದ್ದು, 507 ಕೋಟಿ ರೂ. ಲಾಭ ಗಳಿಸಿದೆ. ಇದು ಸಂಸ್ಥೆಯ ಪಾಲಿಗೆ ಚಾರಿತ್ರಿಕ ಮೈಲುಗಲ್ಲಾಗಿದ್ದು, ಸಾರ್ವಜನಿಕ ಉದ್ದಿಮೆಗಳ ಸಾಧನೆಯಲ್ಲಿ ಕಿರೀಟಪ್ರಾಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.

ಸಂಸ್ಥೆಯ ಈ ಅಪೂರ್ವ ಸಾಧನೆಯ ಸಂಭ್ರಮಾಚರಣೆಯ ನಿಮಿತ್ತವಾಗಿ ನಗರದ ಖಾಸಗಿ ಹೋಟೆಲಿನಲ್ಲಿ ಇಂದು (ಮಂಗಳವಾರ ಏ. 28) ಏರ್ಪಡಿಸಿದ್ದ ಮೈಸೂರು ಸ್ಯಾಂಡೆಲ್ ನ ಸಾಧನೆಯ ಶಿಖರ ಕಾರ್ಯಕ್ರಮದಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಸ್ಥೆಯು ಮೊದಲ ಒಂದು ಸಾವಿರ ಕೋಟಿ ರೂ.ಗಳ ವಹಿವಾಟನ್ನು ತಲುಪಲು 105 ವರ್ಷ ತೆಗೆದುಕೊಂಡಿತ್ತು. ಆದರೆ, ಅಲ್ಲಿಂದ 2 ಸಾವಿರ ಕೋಟಿ ರೂ. ಮಟ್ಟವನ್ನು ಕೇವಲ ನಾಲ್ಕು ವರ್ಷಗಳಲ್ಲಿ ತಲುಪಿದೆ. ಅದರಲ್ಲೂ 2022-23 ರಲ್ಲಿ 1,375 ಕೋಟಿ ರೂ. ವಹಿವಾಟು ನಡೆಸಿದ್ದ ಸಂಸ್ಥೆಯು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕಳೆದ ಮೂರು ವರ್ಷಗಳಲ್ಲಿ 2,016 ಕೋಟಿ ರೂ. ತಲುಪಿದೆ. ಇಷ್ಟು ಅಲ್ಪಾವಧಿಯಲ್ಲಿ ಕೆ.ಎಸ್.ಡಿ.ಎಲ್ ವಹಿವಾಟು 641 ಕೋಟಿ ರೂ.ಗಳನ್ನು ಹೆಚ್ಚಳ ಕಂಡಿದೆ ಎಂದಿದ್ದಾರೆ.

ಮೊದಲು ಸಂಸ್ಥೆಯು ಕೇವಲ 34 ಉತ್ಪನ್ನಗಳನ್ನು ಹೊಂದಿತ್ತು. ಮೂರು ವರ್ಷಗಳಲ್ಲಿ ನಾವು 57 ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದೇವೆ. ಈಗ ಒಟ್ಟು 94 ಉತ್ಪನ್ನಗಳಿವೆ. ಯಾವುದೇ ಹೊಸ ನೇಮಕಾತಿ ಇಲ್ಲದೆ, ಯಂತ್ರೋಪಕರಣಗಳ ಖರೀದಿ ಇಲ್ಲದೆ ಇದನ್ನೆಲ್ಲ ಸಾಧಿಸಲಾಗಿದೆ. ಸಂಸ್ಥೆಯ ಉತ್ಪಾದನಾ ಸಾಮರ್ಥ್ಯ 26 ಸಾವಿರ ಮೆಟ್ರಿಕ್ ಟನ್ ಇದ್ದರೂ ಪರಿಣಾಮಕಾರಿ ಕಾರ್ಯವಿಧಾನದ ಮೂಲಕ 2025-26ರಲ್ಲಿ 47 ಸಾವಿರ ಮೆಟ್ರಿಕ್ ಟನ್ ಉತ್ಪಾದಿಸಲಾಗಿದೆ. ಬಂದಿರುವ 507 ಕೋಟಿ ರೂ. ಲಾಭದಲ್ಲಿ ಸರಕಾರಕ್ಕೆ 157 ಕೋಟಿ ರೂ. ಲಾಭಾಂಶ (ಡಿವಿಡೆಂಡ್) ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ ಹಸ್ತಾಂತರಿಸಲಾಗುವುದು. ಹೋದ ವರ್ಷ 135 ಕೋಟಿ ರೂ. ಕೊಡಲಾಗಿತ್ತು. ಇದರಲ್ಲಿ ಈಗ 22 ಕೋಟಿ ರೂ. ಹೆಚ್ಚಳವಾಗಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ರೂ.88,200 ದಂಡ ವಸೂಲಿ

ನಮ್ಮ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಆಧುನಿಕ ವ್ಯಾಪಾರ ಮತ್ತು ಇ-ಕಾಮರ್ಸ್ ವಹಿವಾಟು ಇರಲಿಲ್ಲ. ನಂತರ ಈ ನಿಟ್ಟಿನಲ್ಲಿ ಪ್ರಯತ್ನ ಮಾಡಿದ್ದಕ್ಕೆ 2025-26ನೇ ಸಾಲಿನಲ್ಲಿ ಆಧುನಿಕ ವ್ಯಾಪಾರ ವಹಿವಾಟಿನಲ್ಲಿ 420 ಕೋಟಿ ರೂ. ಮತ್ತು ಇ-ಕಾಮರ್ಸ್ ವಿಧಾನದಲ್ಲಿ 120 ಕೋಟಿ ರೂ. ದಾಖಲಿಸಿದೆ. ಒಟ್ಟಾರೆಯಾಗಿ ಸಂಸ್ಥೆಯ ವಹಿವಾಟನ್ನು 2028ರ ಹೊತ್ತಿಗೆ 3 ಸಾವಿರ ಕೋಟಿ ರೂ. ಮತ್ತು 2030ರ ಹೊತ್ತಿಗೆ 5 ಸಾವಿರ ಕೋಟಿ ರೂ.ಗಳಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ವಿಜಯಪುರದಲ್ಲಿ 50 ಎಕರೆಯಲ್ಲಿ ನೂತನ ಉತ್ಪಾದನಾ ಘಟಕ ಆರಂಭವಾಗಲಿದ್ದು, ಇದಕ್ಕೆ 229 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ರೈತರಿಗೆ ಉತ್ತೇಜನ

ಸಂಸ್ಥೆಯ ಹೆಮ್ಮೆಯ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆಯೇ ಮೂಲವಸ್ತುವಾಗಿದೆ. ಇದರ ಸುಗಮ ಪೂರೈಕೆಗೆ ಸಂಸ್ಥೆಯು ರೈತರೊಂದಿಗೆ ಕೈಜೋಡಿಸಿದ `ಗ್ರೋ ಮೋರ್ ಸ್ಯಾಂಡಲ್’ ಕಾರ್ಯಕ್ರಮ ರೂಪಿಸಿದೆ. ಇದರಡಿಯಲ್ಲಿ 10 ವರ್ಷಗಳಲ್ಲಿ 10 ಸಾವಿರ ಎಕರೆ ಗಂಧದ ನೆಡುತೋಪು ಬೆಳೆಸಲಾಗುವುದು. ಇದಕ್ಕಾಗಿ ರೈತರಿಗೆ ಪ್ರತೀ ಗಂಧದ ಗಿಡಕ್ಕೆ 3 ವರ್ಷಗಳಿಗೆ 500 ರೂ. ಪ್ರೋತ್ಸಾಹಧನ ನೀಡಲಾಗುವುದು. ಜತೆಗೆ ಬೆಂಗಳೂರಿನ ಜಿಕೆವಿಕೆ ಮತ್ತು ವಿಜಯಪುರದ ಕೃಷಿ ವಿದ್ಯಾಲಯಗಳ ಸಹಯೋಗದಲ್ಲಿ ಶ್ರೀಗಂಧದ ಅಧ್ಯಯನ ಪೀಠ ತೆರೆಯಲಾಗುವುದು ಎಂದು ಪಾಟೀಲ ತಿಳಿಸಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ರೂ.88,200 ದಂಡ ವಸೂಲಿ
Next: ಸವಣೂರ ತಾಲೂಕಿನಲ್ಲಿ ಅದ್ದೂರಿ ಕಳಸಾರೋಹಣ ಕಾರ್ಯಕ್ರಮ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.