ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 1 ರಲ್ಲಿ ಫೇಲಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ 2 ನ್ನು ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕರೆ ನೀಡಿದ್ದಾರೆ. ಅಲ್ಲದೆ ಪರೀಕ್ಷೆ 2ನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಸರ್ಕಾರವೇ ಪರೀಕ್ಷೆಯ ಶುಲ್ಕವನ್ನು ಬರಿಸಲಾಗುತ್ತದೆ ಎಂದು ಕಳಿಸಿದ್ದಾರೆ.
ವಿದ್ಯಾರ್ಥಿಗಳು 10ನೇ ತರಗತಿಯಲ್ಲಿ ಫೇಲ್ ಆಗಿದ್ದಾರೆ ಎಂಬ ಮನೋಭಾವನೆಯಿಂದ ಖಿನ್ನತೆಗೆ ಒಳಗಾಗಬಾರದು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವನ್ನು ಉಜ್ಜಲಗೊಳಿಸುವುದು ಸರ್ಕಾರ, ಶಿಕ್ಷಣ ಇಲಾಖೆ ಹಾಗೂ ನಮ್ಮೆಲ್ಲರ ಹೊಣೆಯಾಗಿದೆ. ಪರೀಕ್ಷೆಯ ಫಲಿತಾಂಶದಿಂದಾಗಿ ಯಾವುದೇ ವಿದ್ಯಾರ್ಥಿಯು ನಿರಾಸೆಗೊಂಡು ತನ್ನ ಶಿಕ್ಷಣವನ್ನು ಮೊಟಕುಗೊಳಿಸಬಾರದು ಎಂಬುದು ನನ್ನ ಹಾಗೂ ಸರ್ಕಾರದ ದೃಢವಾದ ಆಶಯವಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಬೋಗಸ್ ಗುಂಡಿ ಲೆಕ್ಕ ನಾವು ಕೊಡ್ತೀವಿ: ಆರ್ ಅಶೋಕ್
ಈ ಹಿನ್ನೆಲೆಯಲ್ಲಿ, ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ‘ಪರೀಕ್ಷೆ-2’ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಉಪ ನಿರ್ದೇಶಕರುಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
