ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಕುರ್ಚಿ ಕದನ ದಿನದಿಂದ ದಿನಕ್ಕೆ ಒಂದೊಂದು ತಿರುವ ಪಡೆದುಕೊಳ್ಳುತ್ತಿದ್ದು, ಮೇ 15ಕ್ಕೆ ಡಿಕೆ ಶಿವಕುಮಾರ್ ಅವರು ಸಿಎಂ ಆಗೇ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೈನ್ ಅವರು ಹೇಳಿದ್ದಾರೆ.
ಈ ಕುರಿತು ನಗರದಲ್ಲಿ ಇಂದು (ಏ. 28) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೇ 15ಕ್ಕೆ ಡಿಕೆ ಶಿವಕುಮಾರ್ ಅವರು ಸಿಎಂ ಆಗೋದು ಫಿಕ್ಸ್ ಆಗಿದೆ ಇದೆ ನನ್ನ ಅಂತಿಮ ದಿನಾಂಕ ಎಂದು ಅಚ್ಚರಿ ಹೇಳಿಕೆ ಹೇಳಿದ್ದಾರೆ. ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ!
ಈ ಅವಧಿಯಲ್ಲೇ ಡಿಕೆಶಿ ಸಿಎಂ ಆಗೇ ಆಗುತ್ತಾರೆ. ಅವರಿಗೆ ಅವಕಾಶ ಸಿಗಬೇಕು ಅನ್ನೋದು ಎಲ್ಲರ ಬಯಕೆ. ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬುದು ನಮ್ಮೆಲ್ಲರ ಆಸೆ. ಅವರ ಮಾರ್ಗದರ್ಶನದಲ್ಲಿ ನಾವು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅವರ ನೇತೃತ್ವದಲ್ಲಿ ಈ ರಾಜ್ಯದ ಅಭಿವೃದ್ಧಿ ನೋಡಬೇಕು ಅಂತ ಸಾಕಷ್ಟು ಶಾಸಕರುಗಳ ಆಸೆ ಇದೆ. ಮೇ 15ರ ಒಳಗಡೆ ಅವರಿಗೆ ಅಧಿಕಾರ ಸಿಗುತ್ತೆ ಎನ್ನುವ ಅಭಿಲಾಷೆ ಇದೆ ಎಂದು ತಿಳಿಸಿದ್ದಾರೆ.
