ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಇಂದು (ಮಂಗಳವಾರ ಏಪ್ರಿಲ್ 28) ಕೂಡ್ಲು ಚಿತಗಾರಕ್ಕೆ ಭೇಟಿ ನೀಡಿ, ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ K N ರಮೇಶ್ ಕುಮಾರ್ ಹಾಗೂ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರಾದ ಸತೀಶ್ ಬಾಬು ಅವರೊಂದಿಗೆ ಪರಿಶೀಲನೆ ನಡೆಸಿದರು.
ಪರಿಶೀಲನೆ ನಂತರ ಮಾತನಾಡಿದ ಅವರು, ಚಿತಾಗಾರದ ಸ್ವಚ್ಛತೆ, ಆರೋಗ್ಯಕರ ಪರಿಸರದ ನಿರ್ವಹಣೆ ಹಾಗೂ ಮೂಲಭೂತ ಸೌಲಭ್ಯಗಳ ಸುಧಾರಣೆ ಕುರಿತಾಗಿ ಅಧಿಕಾರಿಗಳಿಗೆ ಅಗತ್ಯ ಮನವಿಯನ್ನು ನೀಡಿದರು.
ಸಾರ್ವಜನಿಕರಿಗೆ ಗೌರವಪೂರ್ಣ ಹಾಗೂ ಸುಸಜ್ಜಿತ ಸೇವೆ ದೊರೆಯುವಂತೆ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಇದನ್ನೂ ಓದಿ: ಜೆಡಿಎಸ್ನಿಂದ ರಾಜ್ಯಪಾಲರಿಗೆ ದೂರು
ನಮ್ಮ ಪ್ರದೇಶದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಇದರೊಂದಿಗೆ ಇನ್ನಷ್ಟು ಸುಧಾರಿತ ವ್ಯವಸ್ಥೆ ನಿರ್ಮಿಸಲು ಕ್ರಮಗಳನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.
