ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ಸಿನಿಮಾ ರಿಲೀಸ್ ಡೇಟ್ ಮತ್ತೆ ಮುಂದೂಡಲಾಗಿದ್ದು ಇದರಿಂದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಹೌದು ಟಾಕ್ಸಿಕ್ ಸಿನಿಮಾ ರಿಲೀಸ್ ದಿನಾಂಕವನ್ನು ಚಿತ್ರತಂಡವು ಮತ್ತೆ ಮುಂದೂಡಿರುವ ಕುರಿತು ಇದೀಗ ನಟ ಯಶ್ ಅವರು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ. ಇದನ್ನೂ ಓದಿ: ನಾಗದೇವರ ಮೊರೆ ಹೋದ ಪೂಜಾ ಹೆಗ್ಡೆ
ಇನ್ನು ಟಾಕ್ಸಿಕ್ ಸಿನಿಮಾಗೆ ವಿಶ್ವದಾದ್ಯಂತ ಭರ್ಜರಿ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲು, ಚಿತ್ರತಂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿಕೊಳ್ಳಲು ನಿರ್ಧರಿಸಿದೆ. ಸಿನಿಮಾವನ್ನು ಕೇವಲ ಭಾರತಕ್ಕೆ ಸೀಮಿತಗೊಳಿಸದೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಅತಿ ದೊಡ್ಡ ಮಟ್ಟಕ್ಕೆ ತಲುಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯಶ್ ತಿಳಿಸಿದ್ದಾರೆ.
