ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸರ್ಕಾರವು ಇದೀಗ ಸ್ಪಂದಿಸಿದ್ದು, 38 ತಿಂಗಳ ಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡಲು ರಾಜ್ಯ ಸರ್ಕಾರವು ಒಪ್ಪಿಗೆ ನೀಡಿದೆ.
ಹೌದು, ಸಾರಿಗೆ ನೌಕರರ ಬಹುದಿನಗಳ ಹೋರಾಟಕ್ಕೆ ಇಂದು ಪ್ರತಿಫಲ ಸಿಕ್ಕಂತಾಗಿದ್ದು 26 ತಿಂಗಳ ಹಿಂಬಾಕಿ ನೀಡಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಇನ್ನು ಈ ಕುರಿತು ಸಾರಿಗೆ ಹಾಗೂ ಮುಜರಾಯಿ ಸಚಿವರಾಗಿರುವಂತ ರಾಮಲಿಂಗ ರೆಡ್ಡಿ ಅವರು ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 26 ತಿಂಗಳ ಹಿಂಬಾಕಿಗೆ ಬಜೆಟ್ ನಂತರ 1,271 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಸಾರಿಗೆ ನೌಕರರ ಬೇಡಿಕೆ ಬಹಳ ದಿನಗಳಿಂದ ಇತ್ತು. ವೇತನ ಪರಿಷ್ಕರಣೆ ಸಂಬಂಧಿಸಿದಂತೆ ಸಾರಿಗೆ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಏ.1 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
