ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಸಂಬಂಧಿಸಿದ ತಿಳುವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಬುಧವಾರ ಏಪ್ರಿಲ್ 29) ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದರು.
ಕೇಂದ್ರ ಜಲಸಂಪನ್ಮೂಲ ಸಚಿವ ಸಿ.ಆರ್.ಪಾಟೀಲ್, ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ದೆಹಲಿಯಿಂದ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮುಂಗಾರು ಮಳೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ: ಶಾಸಕ ಸತೀಶ್ ರೆಡ್ಡಿ
ಸಚಿವರಾದ ಪ್ರಿಯಾಂಕ್ ಖರ್ಗೆ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
