ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು (ಬುಧವಾರ ಏ. 29) ಮಳೆರಾಯ ಅಲ್ಲಲ್ಲಿ ತಂಪೆರೆದಿದ್ದಾನೆ.
ಹೌದು, ಇಂದಿರಾನಗರ, ಎಂಜಿ ರೋಡ್ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಗುಡುಗು ಸಮೇತ ಮಳೆಯಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ತಿಳುವಳಿಕೆ ಪತ್ರ ಸಹಿ ಹಾಕುವ ಕಾರ್ಯಕ್ರಮದಲ್ಲಿ ಸಿಎಂ ಭಾಗಿ
ಇನ್ನು ಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ. ನಾಳೆ (ಏ.30) 24 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
