Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಚರಕನಹಳ್ಳಿ ಪ್ರದೇಶದಲ್ಲಿ ಆಯುಕ್ತರಿಂದ ಸ್ಥಳ ಪರಿಶೀಲನೆ
  • Bangalore
  • State

ಕಾಚರಕನಹಳ್ಳಿ ಪ್ರದೇಶದಲ್ಲಿ ಆಯುಕ್ತರಿಂದ ಸ್ಥಳ ಪರಿಶೀಲನೆ

Praja Vahini April 30, 2026 1 minute read
8f49b51d-b04f-415a-99a2-c022344b62f8
Spread the love

ಬೆಂಗಳೂರು: ಬೆಂಗಳೂರು ನಗರದಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಕಾಚರಕನಹಳ್ಳಿ ಪ್ರದೇಶದಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಾಚರಕನಹಳ್ಳಿ ಕೆರೆಯನ್ನು ವೀಕ್ಷಿಸಿದ ಆಯುಕ್ತರು, ಕೆರೆಯ ಡೀಸಿಲ್ಟಿಂಗ್ (ಹೂಳು ತೆಗೆಯುವ) ಕಾಮಗಾರಿಯನ್ನು ಮೇ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೆರೆಯ ಸಮೀಪದ ಮಾರ್ಗದಲ್ಲಿ ಬಿ-ಸ್ಮೈಲ್ (B-Smile) ವತಿಯಿಂದ ಕೈಗೊಳ್ಳಲಾಗುತ್ತಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲಿಸಿ, ಪಾದಚಾರಿ ಮಾರ್ಗದ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಇದೇ ವೇಳೆ, ಕೆರೆಯ ಒಳಹರಿವಿನ ಭಾಗದ ರಾಜಕಾಲುವೆಯಲ್ಲಿ ನೀರು ನಿಂತಿರುವುದನ್ನು ಗಮನಿಸಿದ ಆಯುಕ್ತರು, ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಅದನ್ನು ಶೀಘ್ರದಲ್ಲಿ ನಿವಾರಣೆ ಮಾಡಲು ನಿರ್ದೇಶನ ನೀಡಿದರು.

ನಗರದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ಅತ್ಯಂತ ಮುಖ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ 8 ಸಾವು; ಹಲವು ಅವಾಂತರಗಳು

ಈ ಸಂದರ್ಭದಲ್ಲಿ ಮುಖ್ಯ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಆದೇಶ: ಶರಣಪ್ರಕಾಶ ಪಾಟೀಲ್
Next: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿತ ಸಂಬಂಧ ಪಟ್ಟ ಎಂಜಿನಿಯರ್ ಅಮಾನತ್ತಿಗೆ ಸಿಎಂ ಆದೇಶ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.