Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತಿದಿನ ಒಂದು ಬಾಳೆಹಣ್ಣು ಸೇವೆನ ಮಾಡುವುದರಿಂದ ಸಿಗುವ ಲಾಭಗಳೇನು ಗೊತ್ತಾ?
  • Healthy Life

ಪ್ರತಿದಿನ ಒಂದು ಬಾಳೆಹಣ್ಣು ಸೇವೆನ ಮಾಡುವುದರಿಂದ ಸಿಗುವ ಲಾಭಗಳೇನು ಗೊತ್ತಾ?

Praja Vahini May 2, 2026 1 minute read
WhatsApp Image 2026-05-02 at 15.00.52
Spread the love

ವರ್ಷವಿಡಿಸಿ ಸಿಗುವಂತ ಬಾಳೆಹಣ್ಣಿನಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳಿದ್ದು ಪ್ರತಿದಿನ ಒಂದು ಬಾಳೆಹಣ್ಣು ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು ಇವೆ ಎಂದು ವೈದ್ಯರು ತಿಳಿಸುತ್ತಾರೆ.

ಹೌದು ಹಣ್ಣುಗಳಲ್ಲಿಯೇ ಅತಿ ಹೆಚ್ಚು ಶಕ್ತಿಯನ್ನು ನೀಡುವ ಹಣ್ಣೆದರೆ ಅದು ಬಾಳೆಹಣ್ಣು. ಈ ಬಾಳೆಹಣ್ಣನ ಪ್ರತಿದಿನ ಒಂದು ಹಣ್ಣನ್ನು ಸೇವಿಸುವುದರಿಂದ ದೇಹಕ್ಕೆ ಬೇಕಾಗಿರುವ ವಿವಿಧ ರೀತಿಯ ಪ್ರೋಟೀನ್ ಸಿಗುವುದರ ಜೊತೆಗೆ ವಿಟಮಿನ್ ಕೂಡ ಸಿಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ.

ಬಾಳೆಹಣ್ಣಿನಲ್ಲಿ ವಿಟಮಿನ್ ಸಿ, ಪ್ರೋಟೀನ್, ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದ್ದು, ಇವುಗಳನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಹಲವು ಪ್ರಯೋಜನಗಳು  ಲಭಿಸುತ್ತವೆ.

ಜೀರ್ಣಕ್ರಿಯೆಗೆ ಉತ್ತಮ: ಊಟ ಮಾಡಿದ ತಕ್ಷಣ ಬಾಳೆಹಣ್ಣು ತಿನ್ನೋದರಿಂದ ಅಜೀರ್ಣತೆ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ. ಬಾಳೆಹಣ್ಣಿನಲ್ಲಿರುವ ಹೇರಳವಾದ ನಾರು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಮಲಬದ್ಧತೆಯನ್ನು ನಿವಾರಿಸುತ್ತದೆ ಮತ್ತು ಹೊಟ್ಟೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.

ಚರ್ಮಕ್ಕೆ ಹೊಳೆಪನ್ನು ನೀಡಲು ಸಹಾಯ: ಬಾಳೆಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ಇದು ಆರೋಗ್ಯಕರ ಮತ್ತು ಹೊಳೆಯುವ ಚರ್ಮವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಪೋಷಕಾಂಶಗಳು ಚರ್ಮಕ್ಕೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್‌ಗಳಿಂದ ರಕ್ಷಿಸುತ್ತವೆ ಮತ್ತು ವಯಸ್ಸಾಗುವಿಕೆಯ ಚಿಹ್ನೆಗಳನ್ನು ಕಡಿಮೆ ಮಾಡುತ್ತವೆ.

ಮೂಳೆ ಸವಿಯದಂತೆ ನೋಡಿಕೊಳ್ಳುತ್ತದೆ: ಬಾಳೆಹಣ್ಣು ಮೂಳೆಗಳನ್ನು ಬಲಪಡಿಸಲು ಸಹ ಸಹಕಾರಿ. ಇದು ಮೂಳೆಗಳನ್ನು ದೀರ್ಘಕಾಲದವರೆಗೆ ಬಲವಾಗಿ ಇಡುತ್ತದೆ. ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿರುವ ಬಾಳೆಹಣ್ಣುಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ.

ಮೆದುಳಿನ ಕಾರ್ಯ ಸುಧಾರಿಸಲು ಸಹಾಯ: ಬಾಳೆಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಬಿ6 ನಂತಹ ಪೋಷಕಾಂಶಗಳಿದ್ದು, ಇದು ಮೆದುಳಿನ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಈ ಪೋಷಕಾಂಶಗಳು ನರಪ್ರೇಕ್ಷಕ ಸಂವಹನವನ್ನು ಹೆಚ್ಚಿಸುತ್ತವೆ, ಇದು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ.

ಕರುಳಿನ ಆರೋಗ್ಯಕ್ಕೆ ಪ್ರಯೋಜನಕಾರಿ:  ಬಾಳೆಹಣ್ಣುಗಳು ಕರುಳಿನ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ. ಆಗಾಗ್ಗೆ ಮಲಬದ್ಧತೆಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಪ್ರತಿನಿತ್ಯ ಒಂದು ಬಾಳೆಹಣ್ಣನ್ನು ಸೇವನೆ ಮಾಡಿ. ಅಲ್ಲದೆ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ಮನಸ್ಥಿತಿಯನ್ನು ಸಹ ಸುಧಾರಿಸಬಹುದು.

 

About the Author

Praja Vahini

Editor

View All Posts

Spread the love

Post navigation

Previous: ರಾಷ್ಟ್ರೀಯ ಜೈವಿಕ ಉದ್ಯಮಶೀಲತಾ ಸ್ಪರ್ಧೆಯ 9ನೇ ಆವೃತ್ತಿಗೆ ಚಾಲನೆ
Next: ರಾಜ್ಯದಲ್ಲಿ ಹೆಚ್ಚಿದ ಹಕ್ಕಿ ಜ್ವರದ ಭೀತಿ!

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.