ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು (ಶನಿವಾರ ಮೇ. 02) ಸುತ್ತೂರು ಶ್ರೀಕ್ಷೇತ್ರದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರನ್ನು ಭೇಟಿ ಮಾಡಿ, ನಾಡಿನ ಹೆಮ್ಮೆಯ ಜನನಾಯಕ “ಶ್ರೀ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ಭಕ್ತಿಪೂರ್ವಕವಾಗಿ ಆಹ್ವಾನಿಸಿ ಆಶೀರ್ವಾದ ಪಡೆದರು. ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ಹಕ್ಕಿ ಜ್ವರದ ಭೀತಿ!
ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪಸಿಂಹ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್.ನಾಗೇಂದ್ರ, ಮೈಸೂರು ಗ್ರಾಮೀಣ ಜಿಲ್ಲಾಧ್ಯಕ್ಷ ಕೆ.ಎನ್.ಸುಬ್ಬಣ್ಣ, ಮಾಜಿ ಶಾಸಕ ನಿರಂಜನ್ ಕುಮಾರ್, ಮುಖಂಡರಾದ ಎಲ್.ಆರ್.ಮಹದೇವಸ್ವಾಮಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
