ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು ಕರ್ನಾಟಕ ರಾಜ್ಯದಲ್ಲೂ ಕೂಡ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಚುನಾವಣೆ ನಡೆದಿದ್ದು ಎರಡು ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಸ ವ್ಯಕ್ತಪಡಿಸಿದರು.
ನಗರದಲ್ಲಿ ಇಂದು (ಸೋಮವಾರ ಮೇ 4) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ ಎಂದರು.
ಕೇರಳದಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನ ಗಳಿಸಿದ್ದೇವೆ
ಪಂಚ ರಾಜ್ಯ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅಸ್ಸಾಂನಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದ್ದು, ಅದನ್ನು ಒಪ್ಪಿಕೊಳ್ಳುತ್ತೇವೆ. ಕೇರಳದಲ್ಲಿ ನಮ್ಮ ನಿರೀಕ್ಷೆಗಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದೇವೆ. ಸುಮಾರು 76 ರಿಂದ 80 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆವು, ಆದರೆ 95 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು ಎಂದು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರರಾಗಿದ್ದರು: ಸಿಎಂ
ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಮುನ್ನಡೆ ಸಾಧಿಸಿರುವ ಬಗ್ಗೆ ಮಾತನಾಡಿ ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
