Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಿರಂತರ ಓದು, ಸತತ ಪ್ರಯತ್ನದಿಂದಲೇ ಯಶಸ್ಸು: ಡಾ. ನಿಂಗಪ್ಪ ಕಂಬಳಿ
  • State
  • ಕೊಪ್ಪಳ

ನಿರಂತರ ಓದು, ಸತತ ಪ್ರಯತ್ನದಿಂದಲೇ ಯಶಸ್ಸು: ಡಾ. ನಿಂಗಪ್ಪ ಕಂಬಳಿ

Praja Vahini May 4, 2026
WhatsApp Image 2026-05-04 at 13.15.43
Spread the love

ಕೊಪ್ಪಳ: ಕೊಪ್ಪಳ ನಗರದ ಅಶೋಕ ಸರ್ಕಲ್ ಬಳಿ ಇರುವ ಸ್ಫೂರ್ತಿ ಸ್ಟಡಿ ಸೆಂಟರ್ ಸಭಾ ಭವನದಲ್ಲಿ ಮಹಿಳಾ ಧ್ವನಿ ಸಂಸ್ಥೆ, ಸ್ಫೂರ್ತಿ ಸ್ಟಡಿ ಸೆಂಟರ್ ಹಾಗೂ ಹೈಬ್ರೀಡ್ ನ್ಯೂಸ್ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಸಹಾಯಕ ಪ್ರಾಧ್ಯಾಪಕರಾದ ಡಾ. ನಿಂಗಪ್ಪ ಕಂಬಳಿ ಅವರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿ ಜೀವನದಿಂದಲೇ ಉತ್ತಮ ಗುರಿಯ ಕನಸು ಕಾಣಬೇಕು. ನಿರಂತರ ಓದು ಮತ್ತು ಸತತ ಪ್ರಯತ್ನದಿಂದ ಯಶಸ್ಸು ಸಾಧ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವಾಗ ಚಂಚಲ ಮನಸ್ಸಿನಿಂದ ದೂರವಿರಬೇಕು. ಗ್ರಾಮೀಣ ಪ್ರದೇಶದ ಯುವಕರು ದುಶ್ಚಟಗಳಿಂದ ದೂರವಿದ್ದು ಸ್ಪರ್ಧಾ ಮನೋಭಾವ ಬೆಳೆಸಿಕೊಂಡು ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

ಪ್ರಾಚಾರ್ಯರಾದ ನಾಗನಗೌಡ್ರ ಜುಮ್ಮನ್ನವರ ಅವರು ಮಾತನಾಡಿ, “ಪ್ರಚಲಿತ ದಿನಗಳಲ್ಲಿ ಎಲ್ಲರೂ ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ತಂತ್ರಜ್ಞಾನದ ಸದ್ಬಳಕೆಯೊಂದಿಗೆ ಸ್ಪರ್ಧಾ ಮನೋಭಾವದಿಂದ ಇತರರಿಗೂ ಸ್ಫೂರ್ತಿಯಾಗಬೇಕು. ಬಡತನ, ಹಸಿವಿನ ನೋವು ಅನುಭವಿಸಿದವರೇ ಸಾಧಕರು. ಸತತ ಪರಿಶ್ರಮ ಅಗತ್ಯ” ಎಂದರು.

ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಮುಂಡರಗಿಮಠ, ಚಾರಣಿಗ ಬಿ.ಎನ್. ಹೊರಪೇಟಿ, ಹನುಮೇಶ, ಲಕ್ಕನಗೌಡ, ವಿಜಯಲಕ್ಷ್ಮಿ ಗುಡಿ ಅವರು ಸ್ಪರ್ಧಾರ್ಥಿಗಳಿಗೆ ಶುಭ ಕೋರಿದರು. ಸ್ಫೂರ್ತಿ ಸಂಸ್ಥೆಯ ಮುಖ್ಯಸ್ಥೆ ನಿರ್ಮಲ ಕತ್ತಿ ಅವರು ಅಧ್ಯಕ್ಷತೆ ವಹಿಸಿದ್ದರು. ಯಲ್ಲಾಲಿಂಗ ಕತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸ್ಪರ್ಧಾರ್ಥಿಗಳು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: 2 ಕ್ಷೇತ್ರಗಳಲ್ಲಿ ಗೆಲುವು: ಸಿಎಂ ವಿಶ್ವಾಸ

ಈ ಸಂದರ್ಭದಲ್ಲಿ ಪತ್ರಕರ್ತರಾದ ಕುಬೇರ ಮಜ್ಜಿಗಿ, ಗಂಗಾಧರಯ್ಯ, ಭರಮಪ್ಪ, ಪ್ರಶಾಂತ, ಬಸಮ್ಮ, ಕಾವೇರಿ, ಚಂದಪ್ಪ ಹಾಗೂ ನೂರಾರು ಸ್ಪರ್ಧಾರ್ಥಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: 2 ಕ್ಷೇತ್ರಗಳಲ್ಲಿ ಗೆಲುವು: ಸಿಎಂ ವಿಶ್ವಾಸ
Next: ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದು

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.