ದಾವಣಗೆರೆ: ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ.
ಹೌದು, ದಾವಣಗೆರೆ ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರ ಅವರು ಗೆಲುವಿನ ನಗೆ ಬೀರಿದ್ದಾರೆ. ಇದನ್ನೂ ಓದಿ: ಶೃಂಗೇರಿ ಮರುಎಣಿಕೆಯಲ್ಲಿ ಷಡ್ಯಂತ್ರ ನಡೆದಿದೆ: ಡಿಕೆಶಿ
ಈ ಮೂಲಕ ರಾಜ್ಯದಲ್ಲಿ ನಡೆದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪರಾಭಯಗೊಂಡಿದೆ. ತನ್ನದೇ ಹಿಡಿತದಲ್ಲಿದ್ದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರವನ್ನು ಆಡಳಿತಾರೂಢ ಕಾಂಗ್ರೆಸ್ ಮರಳಿ ತೆಕ್ಕೆಗೆ ಪಡೆದಿದೆ.
ಇನ್ನು ಸಮರ್ಥ್ ಶಾಮನೂರು ಗೆಲುವಿನ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
