ಚೆನ್ನೈ: ತಮಿಳುನಾಡಿನ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ತಮಿಳುನಾಡಿನ ಸಿಎಂ ಎಂಕೆ ಸ್ಟಾಲಿನ್ ಅವರು ತಮ್ಮ ಸಿಎಂ ಸ್ಥಾನಕ್ಕೆ ಇಂದು (ಮಂಗಳವಾರ ಮೇ 5) ರಾಜೀನಾಮೆ ನೀಡಿದ್ದಾರೆ.
ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರ ಕಚೇರಿಗೆ ಔಪಚಾರಿಕವಾಗಿ ಕಳುಹಿಸಿದ್ದಾರೆ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸುವಲ್ಲಿ ಡಿಎಂಕೆ ವಿಫಲವಾದ ಹಿನ್ನೆಲೆ ಸ್ಟಾಲಿನ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಇತ್ತ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಟಿವಿಕೆ ನಾಯಕ ದಳಪತಿ ವಿಜಯ್ 2 ವಾರಗಳಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದ್ದಾರೆ.
