ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರ್ ಅವರು ಗೆಲುವಿನ ನಗೆ ಬೀರಿದ್ದು, ಪಕ್ಷದ ಗೆಲುವಿನ ಹಿನ್ನೆಲೆಯಲ್ಲಿ ಪೈಲ್ವಾನ್ ಮತ್ತವರ ತಂಡ ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಇಂದು (ಬುಧವಾರ ಮೇ. 06) ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಇನ್ನು ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಿದ ಸಾಧಿಕ ಪೈಲ್ವಾನ್ ಹಾಗೂ ಇತರ ಎಲ್ಲಾ ಸ್ಥಳೀಯ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ತಿಳಿಸಿದರು. ಇದನ್ನೂ ಓದಿ: ಡಿಸಿಎಂ ಭೇಟಿ ಮಾಡಿದ ಶಾಸಕ ಉಮೇಶ್ ಮೇಟಿ
ಈ ಸಂದರ್ಭದಲ್ಲಿ ಕಾಂಗ್ರೆಸ್ನ ಹಲವು ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.
