Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೈಕ್ ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು
  • Bangalore
  • Crime
  • State

ಬೈಕ್ ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು

Praja Vahini May 6, 2026 1 minute read
WhatsApp Image 2026-05-06 at 14.04.00
Spread the love

ಹೊಸಕೋಟೆ: ಬೈಕ್ ಕಳ್ಳತನ ಮಾಡಿ ಸಾರ್ವಜನಿಕರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಅಂತರರಾಜ್ಯ ಕಳ್ಳರನ ಹೊಸಕೋಟೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಎಲ್ಲೆಂದರಲ್ಲಿ ಬೈಕ್ ಗಳನ್ನು ನಿಲ್ಲಿಸಿ ಹೋಗುತ್ತಿರುವುದನ್ನೇ ಬಂಡವಾಳ ಮಾಡಿಕೊಂಡಿದ್ದ ಬೈಕ್ ಖದೀಮರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಹೌದು, ಹೊಸಕೋಟೆ ಪೊಲೀಸರ ಭರ್ಜರಿ ಬೇಟೆಗೆ ಸುಮಾರು 55 ಲಕ್ಷ ಮೌಲ್ಯದ 50 ಬೈಕ್ ಗಳನ್ನ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದೆ.

ಇನ್ನುಈ ಖದೀಮರು ತಮ್ಮ ದಿನನಿತ್ಯದ ಮೋಜು ಮಸ್ತಿಗಾಗಿ ಸಾರ್ವಜನಿಕರ ಬೈಕುಗಳನ್ನು ಕಳ್ಳತನ ಮಾಡಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗೆ ಬೈಕುಗಳನ್ನ ಮಾರಾಟ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದರು. ಇದನ್ನೂ ಓದಿ: ಜಮೀರ್ ಅಹ್ಮದ್ ಮನೆಯಲ್ಲಿ ಸಂಬಂಧಿಕರಿಂದಲೇ ಕಳ್ಳತನ

ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್ ಕಳವು ಮಾಡಿದ ಪ್ರಕರಣದ ಬೆನ್ನುಹತ್ತಿದ ಪೊಲೀಸರಿಗೆ ಈ ದೊಡ್ಡ ಜಾಲ ಪತ್ತೆಯಾಗಿದೆ. ಬಂಧಿತರು ಕೇವಲ ಹೊಸಕೋಟೆ ಮಾತ್ರವಲ್ಲದೆ ಕೋಲಾರ, ಮಾಲೂರು, ಬಂಗಾರಪೇಟೆ, ಕೆ.ಆರ್. ಪುರ ಮತ್ತು ಕಾಡುಗೋಡಿ ಭಾಗಗಳಲ್ಲಿಯೂ ತಮ್ಮ ಕೈಚಳಕ ತೋರಿಸುತ್ತಿದ್ದರು.

ಪ್ರಸ್ತುತ ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಹೊಸಕೋಟೆ ಪೊಲೀಸರು ಇಬ್ಬರನ್ನೂ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಆರೋಗ್ಯ ಇಲಾಖೆ ಎನ್ನುವುದು ಕೇವಲ ಸರ್ಕಾರಿ ಕಚೇರಿಯಲ್ಲ, ಅದು ಜನರ ಪಾಲಿನ ಸಂಜೀವಿನಿ: ದಿನೇಶ್ ಗುಂಡೂರ್
Next: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಿದ್ದರಾಮೇಶ್ವರ ಜಯಂತಿ ಆಚರಣೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.