ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಇಂದು (ಶುಕ್ರವಾರ ಮೇ. 8) ಚಿತ್ರದುರ್ಗದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಗಳ ಆಶೀರ್ವಾದ ಪಡೆದು, ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ’ಕ್ಕೆ ಪೂಜ್ಯರನ್ನು ಗೌರವಪೂರ್ವಕವಾಗಿ ಆಮಂತ್ರಿಸಿ, ಕಾರ್ಯಕ್ರಮದಲ್ಲಿ ಶ್ರೀಗಳ ದಿವ್ಯ ಸಾನ್ನಿಧ್ಯವನ್ನು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜಾ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮುಖಂಡರಾದ ಲಿಂಗಮೂರ್ತಿ, ಡಾ. ಸಿದ್ದಾರ್ಥ್ ತಿಪ್ಪಾರೆಡ್ಡಿ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
