ಬೆಂಗಳೂರು: ಕೋಟಿ ನಾಡು ಚಿತ್ರದುರ್ಗದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಪ್ರವೇಶಿಸಿ 50 ವರ್ಷದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಅರ್ಪಿಸಲು ಕೋಟಿ ನಾಡಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇನ್ನು ಈ ಕುರಿತು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆಸಿದ್ದು, ಯಡಿಯೂರಪ್ಪ ಅವರಿಗೆ ಭಗವಂತ ಆಯಸ್ಸು, ಆರೋಗ್ಯ ನೀಡಿ ಕಾಪಾಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಿನ ವಿಚಾರದ ಕುರಿತು ಡಿಕೆಶಿ ಹೇಳಿದ್ದೇನು?
ನಗರದಲ್ಲಿ ಇಂದು (ಶನಿವಾರ ಮೇ 9) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ರಾಜ್ಯದ ಸೇವೆ ಮಾಡಿದ್ದಾರೆ. ಅವರ ಜನ್ಮದಿನವಿದ್ದರೆ ಅವರಿಗೆ ಒಳ್ಳೆಯದಾಗಲಿ. ಅವರ ಪಕ್ಷದವರು ಪಕ್ಷ ಸಂಘಟನೆ ಹಾಗೂ ಅವರಿಗೆ ಗೌರವ ನೀಡುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಅವರಿಗೆ ಉತ್ತಮ ಆರೋಗ್ಯ ಸಿಗಲಿ ಎಂದು ಆಶಿಸುತ್ತೇನೆ. ಭಗವಂತ ಅವರಿಗೆ ಹೆಚ್ಚಿನ ಆಯಸ್ಸು ನೀಡಲಿ. ರಾಜಕೀಯವಾಗಿ ಅವರ ವಿಚಾರಧಾರೆ ಬೇರೆ, ನಮ್ಮ ವಿಚಾರಧಾರೆ ಬೇರೆ ಎಂದು ತಿಳಿಸಿದರು.
