ಬೆಂಗಳೂರು: ವಾಹನ ಸವಾರರೇ ಎಚ್ಚರ..ಎಚ್ಚರ..ಬೆಂಗಳೂರು ನಗರದಲ್ಲಿ ನೋ ಪಾರ್ಕಿಂಗ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಂದರಲ್ಲಿ ವಾಹನಗಳನ್ನ ಪಾರ್ಕಿಂಗ್ ಮಾಡಿದರೆ ಕಾಣೆ ಆಗೋದಂತು ಗ್ಯಾರಂಟಿ.
ಹೌದು, ಬೆಂಗಳೂರು ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಮತ್ತೆ ಆರಂಭವಾಗಿದ್ದು, ಕೇವಲ ಒಂದೇ ಒಂದು ತಿಂಗಳಲ್ಲಿ ಬರೋಬ್ಬರಿ 600 ವಾಹನಗಳನ್ನ ಟೋಯಿಂಗ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ನಗರದ 3 ನಗರ ಪಾಲಿಕೆ ವ್ಯಾಪ್ತಿಯಲ್ಲಿ ಟೋಯಿಂಗ್ ಕಾರ್ಯಾಚರಣೆ ಆರಂಭಿಸಲಾಗಿದ್ದು, ನೋ ಪಾರ್ಕಿಂಗ್ ಹಾಗೂ ರಸ್ತೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದ ವಾಹನಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಈವರೆಗೆ ಒಂದೇ ತಿಂಗಳಲ್ಲಿ ಸುಮಾರು 600 ವಾಹನಗಳನ್ನು ಟೋಯಿಂಗ್ ಮಾಡಿ ಸಂಬಂಧಿತ ಚಾಲಕರಿಗೆ ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಶ್ರೀ ಕಾವೇರಮ್ಮನವರ ವಾರ್ಷಿಕೋತ್ಸವಕ್ಕೆ ಚಾಲನೆ
ಪೊಲೀಸರು ಹಾಗೂ ಜಿಬಿಎ ಸಿಬ್ಬಂದಿ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸುತ್ತಿದ್ದು, ಯಾವುದೇ ತಾಂತ್ರಿಕ ಸಮಸ್ಯೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
