ದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮೇ. 03 ರಂದು ನಡೆಸಲಾದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ.
ಹೌದು, ಮೇ, 03 ರಂದು ನಡೆದ ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಶೀಘ್ರದಲ್ಲಿಯೇ ಬದಲಿ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಶೀಘ್ರವೇ ಬದಲಿ ದಿನಾಂಕವನ್ನು ತಿಳಿಸುವುದಾಗಿ ಹೇಳಿದೆ.
ರಾಜಸ್ಥಾನದ ಸಿಕಾರ್ನಲ್ಲಿ ಮೇ 1 ರಂದೇ ‘ಊಹೆ ಪತ್ರಿಕೆ’ ರೂಪದಲ್ಲಿ ಪ್ರಶ್ನೆಗಳು ಪ್ರಸಾರವಾಗಿದ್ದವು ಎಂದು ವರದಿಯಾಗಿದೆ. ಈ ಊಹೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ಹೊಸ ಮಾದರಿಯ ಭ್ರಷ್ಟಾಚಾರ ಹೆಚ್ಚಾಗಿದೆ: ಬೊಮ್ಮಾಯಿ
ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭಿಸಿದೆ. ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ NTA ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.
