ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಮೇ. 10 ರಂದು ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಗ್ಗಲಿಪುರದ ಸುತ್ತಮುತ್ತಲಿನಲ್ಲಿ ಜಿಲೆಟಿನ್ ಕಡ್ಡಿಗಳು ಕಾಣಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ಈ ಕುರಿತು ಇದೀಗ ಅರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿದ್ದು, ದೇಶದ ಪ್ರಧಾನಿಗೆ ಭದ್ರತೆ ನೀಡುವಲ್ಲಿ ಕಾಂಗ್ರೆಸ್ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ನಾಗಿಣಿ ಸಂಸಾರದಲ್ಲಿ ಬಿರುಕು!
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಕಾರ್ಯಕ್ರಮದ ಸಂದರ್ಭದಲ್ಲಿ ಸಮರ್ಪಕ ಭದ್ರತೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ದೇಶದ ಪ್ರಧಾನಿಗೂ ಭದ್ರತೆ ನೀಡಲಾಗದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿದೆ. ಇದು ರಾಜ್ಯದ ಗೌರವಕ್ಕೆ ಧಕ್ಕೆ ತರುವ ಸಂಗತಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
