Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಸರ್ಕಾರ ದೇಶದ ಯುವಜನತೆಗೆ ಕ್ರೂರ ದ್ರೋಹ ಮಾಡಿದೆ: ಸಿಎಂ
  • Bangalore
  • Politics
  • State

ಕೇಂದ್ರ ಸರ್ಕಾರ ದೇಶದ ಯುವಜನತೆಗೆ ಕ್ರೂರ ದ್ರೋಹ ಮಾಡಿದೆ: ಸಿಎಂ

Praja Vahini May 14, 2026 1 minute read
WhatsApp Image 2026-05-14 at 15.51.20
Spread the love

ಬೆಂಗಳೂರು: ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಒಂದು ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ.

2024ರಲ್ಲೇ ನಮ್ಮ ಸರ್ಕಾರವು ನೀಟ್ ಪರೀಕ್ಷೆಯು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ಸದನ ನಿರ್ಣಯ ಕೈಗೊಂಡಿದ್ದೆವು. ಅಂದಿನ ನಮ್ಮ ಕಾಳಜಿ ಎಷ್ಟು ಸತ್ಯ ಮತ್ತು ಅನಿವಾರ್ಯವಾಗಿತ್ತು ಎನ್ನುವುದನ್ನು ಇಂದಿನ ಪರೀಕ್ಷಾ ರದ್ದತಿಯು ಸಾಬೀತುಪಡಿಸಿದೆ.

ನೇಮಕಾತಿ ಪರೀಕ್ಷೆಗಳಿಂದ ಹಿಡಿದು ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳವರೆಗೆ ಪೇಪರ್ ಲೀಕ್ ಪ್ರಕರಣಗಳು ಪ್ರತಿಭಾವಂತ ವಿದ್ಯಾರ್ಥಿಗಳ ಹಿತ ರಕ್ಷಣೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಹೊಣೆ ಹೊರಬೇಕಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಯುವಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ. ಇದನ್ನೂ ಓದಿ: ವಾಹನ ಸವಾರರ ಅನಾನುಕೂಲ ತಪ್ಪಿಸಿದ ಜಲಮಂಡಳಿ!

ಈ ಬಗ್ಗೆ ಪಾರದರ್ಶಕ, ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು ಮತ್ತು ಅಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಪುನಃಸ್ಥಾಪಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

ಪೇಪರ್ ಲೀಕ್‌ನಿಂದ ತೊಂದರೆಗೀಡಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರ ಜೊತೆ ನಾವಿದ್ದೇವೆ. ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತೆ ಮಾಡುವುದು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ವಾಹನ ಸವಾರರ ಅನಾನುಕೂಲ ತಪ್ಪಿಸಿದ ಜಲಮಂಡಳಿ!
Next: ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ವಿದ್ಯಾರ್ಥಿಗೆ ಯಾವುದೇ ಅಡ್ಡಿಯಿಲ್ಲ: ಸಿಎಂ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.