ಮೈಸೂರು: ರಾಜ್ಯದಲ್ಲಿರುವ ಶಾಲಾ-ಕಾಲೇಜುಗಳಲ್ಲಿ ಜನಿವಾರ, ಹಿಜಾಬ್ ಸೇರಿದಂತೆ ಧಾರ್ಮಿಕ ಸಂಕೇತಗಳನ್ನು ಧರಿಸಿದ ವಿದ್ಯಾರ್ಥಿಗಳನ್ನು ಶಾಲಾ-ಕಾಲೇಜುಗಳಲ್ಲಿ ಒಳಗಡೆ ಸೇರಿಸಿಕೊಳ್ಳುತ್ತಿರಲಿಲ್ಲ. ಆದ್ದರಿಂದ ಇದೀಗ ರಾಜ್ಯ ಸರ್ಕಾರವು ಈ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದ್ದು, ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಹೊಸದಾಗಿ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಿಳಿಸಿದರು.
ಮೈಸೂರಿನಲ್ಲಿ ಇಂದು (ಗುರುವಾರ ಮೇ 14) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಬಿಜೆಪಿ ಎತ್ತಿರುವ ತಕರಾರು ಇದು. ಪ್ರತಿಯೊಬ್ಬ ಮನುಷ್ಯನಿಗೆ ತಮ್ಮದೇ ಆದ ಸಂಪ್ರದಾಯಗಳನ್ನ ಆಚರಿಸುವ ಹಕ್ಕಿದೆ. ಹಾಗಾಗಿ ಶಾಲಾ-ಕಾಲೇಜುಗಳಲ್ಲಿ ಯಾವುದೇ ಅಡ್ಡಿ ಪಡಿಸದೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ದೇಶದ ಯುವಜನತೆಗೆ ಕ್ರೂರ ದ್ರೋಹ ಮಾಡಿದೆ: ಸಿಎಂ
ಪ್ರಧಾನಿಗಳ ಹೇಳಿಕೆ ಸರಿಯಿಲ್ಲ
ಪ್ರಧಾನಿ ನರೇಂದ್ರ ಮೋದಿಯವರು ಡೀಸಲ್ ಬಳಕೆ ಕಡಿತಗೊಳಿಸಲು ತಮ್ಮ ಬೆಂಗಾವಲನ್ನು ಕಡಿತಗೊಳಿಸಿದ್ದು ಅದು ಕೇವಲ ತಾತ್ಕಾಲಿಕ ಕ್ರಮವಷ್ಟೇ. ಪ್ರಧಾನಿಗಳು ಹೇಳಿರುವುದು ಸರಿಯಾದ ಕ್ರಮವಲ್ಲ. ಅದಕ್ಕೆ ಬದಲು ಬೇರೆ ದೇಶಗಳೊಂದಿಗೆ ಮಾತನಾಡಿ ಒಮ್ಮತಕ್ಕೆ ಬರುವುದು ಸೂಕ್ತ ಎಂದರು.
