ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎರಡಕ್ಕೆ ಎರಡು ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮತ್ತೆ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.
ಇನ್ನು ಹೊಸದಾಗಿ ಎರಡು ಕ್ಷೇತ್ರದಲ್ಲಿ ಗೆದ್ದಿರುವ ಅಭ್ಯರ್ಥಿಗಳಿಗೆ ಇಂದು (ಗುರುವಾರ ಮೇ 14) ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಹೌದು, ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರಿಗೆ ಸಭಾಧ್ಯಕ್ಷರು ಶುಭ ಕೋರಿದರು. ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಧರಿಸಲು ವಿದ್ಯಾರ್ಥಿಗೆ ಯಾವುದೇ ಅಡ್ಡಿಯಿಲ್ಲ: ಸಿಎಂ
ಈ ಮಹತ್ವದ ಕ್ಷಣಕ್ಕೆ ರಾಜ್ಯ ರಾಜಕಾರಣದ ಹಲವು ಗಣ್ಯರು ಸಾಕ್ಷಿಯಾದರು. ವೇದಿಕೆಯ ಮೇಲೆ ಸಚಿವರಾದ ಸತೀಶ್ ಜಾರಕಿಹೊಳಿ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಆರ್. ಪಾಟೀಲ್ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು.
