ಬೆಂಗಳೂರು: ಬೆಲೆ ಏರಿಕೆ ಮೋದಿ ಅವರ ಕೊಡುಗೆ. ಅವರು ಬೇರೆ ರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಉಳಿಸಿಕೊಂಡು ಬಂದಿಲ್ಲ. ಅಂತರರಾಷ್ಟ್ರೀಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಮೋದಿ ಅವರು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅದಕ್ಕೆ ಅವರು ವಿದ್ಯುತ್ ಉಳಿಸಿ, ಪೆಟ್ರೋಲ್ ಬಳಸಬೇಡಿ ಎಂದು ಹೇಳುತ್ತಿದ್ದಾರೆ. ಇಂಧನಗಳನ್ನು ಬಳಸದೇ ದಿನನಿತ್ಯ ಜೀವನ ಮಾಡುವುದು ಹೇಗೆ?. ಅನೇಕರು ತಮ್ಮ ಬೆಂಗಾವಲು ಪಡೆ ವಾಹನಗಳನ್ನು ಕಡಿತ ಮಾಡಿದ್ದಾರೆ. ಇದು ಆಗಬಹುದು. ಆದರೆ ಜನ ಸಾಮಾನ್ಯ ಓಡಾಟ ಮಾಡದೇ ಇರಲು ಹೇಗೆ ಸಾಧ್ಯ. ಬದುಕಿಗಾಗಿ ಪ್ರಯಾಣ ಮಾಡಬೇಕಲ್ಲವೇ? ಚಿನ್ನ ಖರೀದಿ ಮಾಡಬೇಡಿ ಎಂದಿದ್ದಾರೆ ಇದು ಹೇಗೆ ಸಾಧ್ಯ. ವಿವಾಹಿತ ಮಹಿಳೆಯರಿಗೆ ಮಾಂಗಲ್ಯ ಸರ ಬೇಕು. ಹೀಗಿದ್ದಾಗ ಚಿನ್ನ ಕೊಂಡುಕೊಳ್ಳಬೇಡಿ ಎಂಬುದು ಹೇಗೆ ಸಾಧ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ನಗರದಲ್ಲಿ ಇಂದು (ಶುಕ್ರವಾರ ಮೇ 1)5 ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶ ದೊಡ್ಡ ದುರಂತದ ಸ್ಥಿತಿಗೆ ಬಂದಿದೆ. ಅಡುಗೆ ಎಣ್ಣೆ ಬಳಸಬೇಡಿ ಎಂದರೆ ಎಲ್ಲಿ ಕಡಿಮೆ ಮಾಡೋಕೆ ಆಗುತ್ತೆ. ಇದೆಲ್ಲಾ ಮಾಡೋಕೆ ಆಗಲ್ಲ. ಜನ ಸಂಪಾದನೆ ಮಾಡುತ್ತಾರೆ ಬದುಕುತ್ತಾರೆ. ಯಾರನ್ನೂ ನಿಯಂತ್ರಣ ಮಾಡೋಕೆ ಆಗಲ್ಲ ಎಂದರು.
ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಮಾಡಿದ ಯೋಜನೆಯನ್ನೇ ನಾವು ಮುಂದುವರೆಸುತ್ತಾ ಇರುವುದು. ನಾನು ರೈತರ ಬಳಿ ಮಾತನಾಡಲು ಸಮಯ, ದಿನಾಂಕ ನಿಗದಿ ಮಾಡಿಕೊಂಡು ಹೋಗುತ್ತೇನೆ. ರೈತರು ನನಗೆ ಎರಡೇಟು ಹೊಡೆಯಬಹುದು, ಅಷ್ಟೇ ತಾನೇ..? ಬಟ್ಟೆ ಹರಿಯಬಹುದು, ಕಲ್ಲೆಸೆಬಹುದು, ಧಿಕ್ಕಾರ ಹಾಕಬಹುದು. ಅದಕ್ಕೆಲ್ಲಾ ಹೆದರಿಕೊಳ್ಳಲು ಆಗುತ್ತದೆಯೇ? ಮುಂದೆ ಅವರ ಭವಿಷ್ಯ, ಮಕ್ಕಳ ಹಾಗೂ ಆಸ್ತಿಗಳ ಭವಿಷ್ಯ ಮುಖ್ಯ. ಇವತ್ತಲ್ಲ ಮುಂದಿನ 20 ವರ್ಷಗಳ ನಂತರ ಬಿಡದಿ, ಬೆಂಗಳೂರು ದಕ್ಷಿಣದ ಜನರು ನನ್ನನ್ನು ನೆನಪಿಸಿಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ನಗರದ ಸ್ವಚ್ಛತೆಗೆ ಅಡ್ಡಿಯುಂಟು ಮಾಡುವ ಯಾವುದೇ ಸಂಗತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಡಾ. ರಾಜೇಂದ್ರ ಕೆ.ವಿ
ಕುಮಾರಸ್ವಾಮಿ ಅವರೇ ಈ ಯೋಜನೆಯ ಭೂಮಿಯನ್ನು ಡಿನೊಟಿಫೈ ಮಾಡಬಹುದಿತ್ತಲ್ಲವೇ? ಯಾಕೆ ಮಾಡಲಿಲ್ಲ? ನಾನು ಡಿನೋಟಿಫೈ ಮಾಡಲು ತಯಾರಿಲ್ಲ. ಅವರು ಡಿನೋಟಿಫೈ ಮಾಡಿ ಎಷ್ಟು ಅನುಭವಿಸುತ್ತಿದ್ದಾರೆ ಎಂದು ಅವರಿಗೆ ಗೊತ್ತು. ಯಡಿಯೂರಪ್ಪ ಅವರಿಗೆ, ನನಗೂ ಗೊತ್ತಿದೆ” ಎಂದು ತಿರುಗೇಟು ನೀಡಿದರು.
ಕೇರಳ ನೂತನ ಸಿಎಂಗೆ ಶುಭಕೋರುತ್ತೇನೆ
ಕೇರಳ ನೂತನ ಸಿಎಂ ಅವರಿಗೆ ಶುಭಾಶಯ ಕೋರುತ್ತೇನೆ. ಪಕ್ಷದಲ್ಲಿ ಅರ್ಹತೆ ಇರುವ ಅನೇಕ ಹಿರಿಯ ನಾಯಕರು ಇದ್ದಾರೆ. ಪಕ್ಷದ ಹೈಕಮಾಂಡ್ ಸತೀಶನ್ ಅವರಿಗೆ ಅವಕಾಶ ನೀಡಿದೆ. ಅವರಿಗೆ ನಾನು ಮನಃಪೂರ್ವಕವಾಗಿ ಶುಭ ಕೋರುತ್ತೇನೆ. ಎಲ್ಲಾ ಮೈತ್ರಿ ಪಕ್ಷಗಳಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಜನರ ಆಶೋತ್ತರಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತೇವೆ ಎಂದರು.
ಎಸ್ ಐ ಆರ್ ಕರ್ನಾಟಕಕ್ಕೆ ಕಾಲಿಡುತ್ತಿರುವ ಬಗ್ಗೆ ಕೇಳಿದಾಗ, “ನಮಗೂ ಇದರ ಬಗ್ಗೆ ಅರಿವಿದೆ. ಪಕ್ಷದ ನಾಯಕರಿಗೆ ಇದರ ಬಗ್ಗೆ ತಿಳುವಳಿಕೆ ಮೂಡಿಸಲಾಗಿದೆ. ಎಲ್ಲಾ ಪಕ್ಷಗಳು ಈ ಕೆಲಸ ಮಾಡುತ್ತಿವೆ. ಬಿಜೆಪಿ, ಜನತಾದಳ ಎಲ್ಲರೂ ಅವರವರ ಮತಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ.
ತಮಿಳುನಾಡು ಸಿಎಂ ವಿಜಯ್ ಅವರಿಗೆ ಶುಭಾಶಯ ತಿಳಿಸಿದ ಬಗ್ಗೆ ಕೇಳಿದಾಗ, “ಹೌದು ನೆನ್ನೆ ಅವರಿಗೆ ಶುಭಕೋರಿದೆ.
