Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದರ್ಶನ್ ಗೆ ಇನ್ನೂ ಒಂದು ವರ್ಷ ಇಲ್ಲ ಬಿಡುಗಡೆ ಭಾಗ್ಯ!?
  • Bangalore
  • Cinema
  • Crime
  • State

ದರ್ಶನ್ ಗೆ ಇನ್ನೂ ಒಂದು ವರ್ಷ ಇಲ್ಲ ಬಿಡುಗಡೆ ಭಾಗ್ಯ!?

Praja Vahini May 15, 2026
WhatsApp Image 2026-05-15 at 16.26.00
Spread the love

ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗಾಗಲೇ ಜೈಲು ಸೇರಿ ಒಂದು ವರ್ಷ ತುಂಬುತ ಬಂದರೂ ಕೂಡ ಬಿಡುಗಡೆ ಭಾಗ್ಯ ಇಲ್ಲದಂತಾಗಿದೆ.

ಇನ್ನು ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯಲ್ಲಿ ವಿಳಂಬವಾಗುತ್ತಿದೆ ಸುಪ್ರೀಂಕೋಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಈ ಅರ್ಜಿಯನ್ನ ಇದೀಗ ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಮುಂದಿನ ಒಂದು ವರ್ಷದವರೆಗೆ ದರ್ಶನ್ ಜೈಲಿನಲ್ಲಿಯೇ ಕಾಲ ಕಳೆಯುವಂತಹ ಸ್ಥತಿ ನಿರ್ಮಾಣವಾಗಿದೆ.

ಹೌದು, ನಟ ದರ್ಶನ್ ಗೆ ಇನ್ನೂ ಒಂದು ವರ್ಷದವರೆಗೆ ಜೈಲಿನಲ್ಲಿ ಇರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ತಮ್ಮ ವೃತ್ತಿ ಜೀವನಕ್ಕೆ ಸಂಕಷ್ಟ ಎದುರಾಗಿದೆ. ಜಾಮೀನು ಅರ್ಜಿಯಲ್ಲಿ ದರ್ಶನ್ ಅವರು ತಮ್ಮ ವೃತ್ತಿಜೀವನದ ಸಂಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದರು. ‘ನಾನು ಪ್ರತಿ ವರ್ಷ ಸರಾಸರಿ 2 ರಿಂದ 3 ಸಿನಿಮಾಗಳನ್ನು ಮಾಡುತ್ತಿದ್ದೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮೀಡಿಯಾ ಹೌಸ್ ಸ್ಟೂಡಿಯೋಸ್ ಅಂತಹ ದೊಡ್ಡ ಸಂಸ್ಥೆಗಳ ಚಿತ್ರಗಳಿಗೆ ಈಗಾಗಲೇ ಸಹಿ ಮಾಡಿದ್ದೇನೆ. ನಿರ್ಮಾಪಕರು ಸುಮಾರು 6 ಕೋಟಿ ರೂಪಾಯಿ ಬಂಡವಾಳ ಹೂಡಿದ್ದಾರೆ. ಸುದೀರ್ಘ ಜೈಲುವಾಸವು ನನ್ನ ಸಿನಿಮಾ ಭವಿಷ್ಯಕ್ಕೆ ಮರಣಗಂಟೆಯಾಗಲಿದೆ’ ಎಂದು ಅವರು ಅಳಲು ತೋಡಿಕೊಂಡಿದ್ದರು. ಇದನ್ನೂ ಓದಿ: ಡಿಕೆಶಿಗೆ ಹುಟ್ಟು ಹಬ್ಬದ ಶುಭ ಕೋರಿದ ಸಚಿವ ಶರಣ್ ಪ್ರಕಾಶ್ ಪಾಟೀಲ್

ಕೋರ್ಟ್ ಆದೇಶದ ಪ್ರಕಾರ ದರ್ಶನ್ ಇನ್ನೂ ಒಂದು ವರ್ಷ ಜೈಲಿನಲ್ಲೇ ಇರಬೇಕು. ಇದು ಅವರ ವೃತ್ತಿಜೀವನಕ್ಕೆ ಮತ್ತು ಅವರ ಮೇಲೆ ಕೋಟಿಗಟ್ಟಲೆ ಹಣ ಹೂಡಿರುವ ನಿರ್ಮಾಪಕರಿಗೆ ಭಾರಿ ಹೊಡೆತ ನೀಡಿದೆ.

ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದಾರೆ. ಕಳೆದ 8 ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಇಷ್ಟು ನಿಧಾನಗತಿಯಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಪ್ರಕರಣ ಶೀಘ್ರವಾಗಿ ಮುಕ್ತಾಯಗೊಳ್ಳುವ ಲಕ್ಷಣಗಳಿಲ್ಲ. ಇದೇ ಅಂಶವನ್ನು ದರ್ಶನ್ ಅವರು ಜಾಮೀನು ಪಡೆಯಲು ಪ್ರಮುಖ ಅಸ್ತ್ರವಾಗಿ ಬಳಸಿದ್ದರು. ‘ಒಂದು ವರ್ಷದ ಒಳಗೆ 60 ಸಾಕ್ಷ್ಯಗಳ ವಿಚಾರಣೆ ಮುಗಿಸಿ, ಆ ಬಳಿಕ ವಿಚಾರಣಾ ನ್ಯಾಯಾಲಯದಲ್ಲಿಯೇ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಬಹುದು’ ಎಂದು ಕೋರ್ಟ್ ಹೇಳಿದೆ.

About the Author

Praja Vahini

Editor

View All Posts

Spread the love

Post navigation

Previous: ಡಿಕೆಶಿಗೆ ಹುಟ್ಟು ಹಬ್ಬದ ಶುಭ ಕೋರಿದ ಸಚಿವ ಶರಣ್ ಪ್ರಕಾಶ್ ಪಾಟೀಲ್
Next: ಪ್ರಯಾಣಿಕರ ಜೇಬಿಗೆ ಕತ್ತರಿ; ಖಾಸಗಿ ಬಸ್ ಟಿಕೆಟ್ ದರ ಏರಿಕೆ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.