Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇತಿಹಾಸ ಅರಿಯದೆ ಹೋದರೆ ಸಮಾಜದ ಅಂಕುಡೊಂಕುಗಳನ್ನು ಅರಿಯಲು ಸಾಧ್ಯವಿಲ್ಲ: ಸಿಎಂ
  • Bangalore
  • Politics
  • State

ಇತಿಹಾಸ ಅರಿಯದೆ ಹೋದರೆ ಸಮಾಜದ ಅಂಕುಡೊಂಕುಗಳನ್ನು ಅರಿಯಲು ಸಾಧ್ಯವಿಲ್ಲ: ಸಿಎಂ

Praja Vahini May 16, 2026 1 minute read
WhatsApp Image 2026-05-16 at 13.11.47
Spread the love

ಬೆಂಗಳೂರು: ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂತ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರವು ನಿನ್ನೆ ಸಂಜೆ (ಮೇ 15) ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಆಯೋಜಿಸಿದ್ದ ಕನಕದಾಸರ ಸಮಗ್ರ ಸಾಹಿತ್ಯ ಅನುವಾದ ಸಂಪುಟಗಳ 40 ಕೃತಿಗಳ ಬಿಡುಗಡೆ ಮತ್ತು ಕನಕ ಶಿಲ್ಪವನ ಅನಾವರಣಗೊಳಿಸಿ ಮಾತನಾಡಿದ ಅವರು, ಕನಕದಾಸರು ಭಕ್ತಿ ಪಂಥದ ಕವಿಯಷ್ಟೇ ಅಲ್ಲದೇ ಸಮಾಜದ ಅಂಕುಡೊಂಡುಗಳನ್ನು ತಿದ್ದುವ, ಮೂಢನಂಬಿಕೆಗಳ ವಿರುದ್ಧ ಕೆಲಸ ಮಾಡಿದ ಸಮಾಜ ಸುಧಾರಕರೂ ಎಂದರು. ಇದನ್ನೂ ಓದಿ: ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಎದುರಾಯಿತು ಮತ್ತೊಂದು ಸಂಕಷ್ಟ!

ಇಂದಿಗೂ ಕನಕದಾಸರು ಹಾಗೂ ಬಸವಣ್ಣ ಬಯಸಿದ ಸಮಾಜ ನಿರ್ಮಾಣ ಆಗಿಲ್ಲ. ಸಮಸಮಾಜದ ಕನಸು ಕಂಡ ಇವರ ಬಗ್ಗೆ ಇಂದಿನ ಪೀಳಿಗೆ ಅರಿತುಕೊಳ್ಳುವುದು ಅವಶ್ಯ. ದಾಸ ಸಾಹಿತ್ಯ ಮತ್ತು ವಚನ ಸಾಹಿತ್ಯ ಅನೇಕ ಭಾಷೆಗಳಿಗೆ ತರ್ಜಮೆಯಾಗಿದ್ದು, ದಾಸ ಸಾಹಿತ್ಯವು ಅನೇಕ ಭಾಷೆಗಳಲ್ಲಿ ಪ್ರಚಾರವಾಗುತ್ತಿರುವುದು ಶ್ಲಾಘನೀಯ. ಕನಕದಾಸರ ಸಾಹಿತ್ಯ ಬೇರೆ ರಾಜ್ಯಗಳಿಗೂ ತಲುಪುತ್ತಿರುವುದು ಸಂತಸದ ಸಂಗತಿ. ಇತಿಹಾಸವನ್ನು ಅರಿಯದೆ ಹೋದರೆ ಸಮಾಜದ ಅಂಕುಡೊಂಕುಗಳನ್ನು ಅರಿಯಲು ಸಾಧ್ಯವಿಲ್ಲ.

ಕನಕದಾಸರು ಬಹುಮುಖಿ ಪ್ರತಿಭೆಯಾಗಿದ್ದರು. ಕನಕದಾಸರ ಸಾಹಿತ್ಯ ಸೃಷ್ಠಿ ಅದ್ಭುತವಾಗಿದ್ದು, 350 ಕ್ಕೂ ಹೆಚ್ಚು ಕೀರ್ತನೆಗಳನ್ನು ರಚಿಸಿದ್ದಾರೆ. ಅವರ ಕೃತಿಗಳನ್ನು ಬೇರೆ ಭಾಷೆಗೆ ತರ್ಜುಮೆ ಮಾಡಿದ ಹಲವು ಭಾಷಾಂತರಕಾರರಿಗೆ ಸರ್ಕಾರದ ಪರವಾಗಿ ಅಭಿನಂದಿಸಲಾಗಿದೆ.

ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ ಅವರ ನೇತೃತ್ವದಲ್ಲಿ ಕನಕದಾಸರ ಕೃತಿಗಳು 14 ಭಾಷೆಗೆ ಭಾಷಾಂತರಗೊಂಡಿದೆ. ಕನಕರ ಕೃತಿಗಳು ದೇಶ – ವಿದೇಶಗಳಿಗೆ ತಲುಪಲು ಇದು ಸಹಕಾರಿಯಾಗಿದೆ. ಈ ಪ್ರತಿಗಳ ಹೆಚ್ಚಿನ ಮುದ್ರಣಕ್ಕೆ ಸರ್ಕಾರ ಇನ್ನೂ ಹೆಚ್ಚಿನ ಅನುದಾನವನ್ನು ನೀಡಲಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಎದುರಾಯಿತು ಮತ್ತೊಂದು ಸಂಕಷ್ಟ!
Next: ​ ನೂತನ ಜೀವನೋಪಾಯ ಸೇವಾ ಕೇಂದ್ರ ಕ್ಕೆ ಚಾಲನೆ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.