ಬೆಂಗಳೂರು: ದೇಶದಲ್ಲಿ ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ಆಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿಯವರು ಮಿತವಾಗಿ ಬಳಸಬೇಕು ಎಂದು ಕರೆ ನೀಡಿರುವ ಬೆನ್ನೆಲೆ ಈಗಾಗಲೇ ದೇಶದಲ್ಲಿ ರಾಜಕೀಯ ನಾಯಕರು ಸಾರ್ವಜನಿಕ ಸಾರಿಗೆ ಬಳಸುತ್ತಿದ್ದಾರೆ. ಅದರಂತೆ ಕರ್ನಾಟಕದಲ್ಲೂ ಕೂಡ ಕೆಲ ರಾಜಕೀಯ ನಾಯಕರು ಸಾರ್ವಜನಿಕ ಸಾರಿಗೆಗಳನ್ನು ಬಳಸುತ್ತಿದ್ದಾರೆ.
ಹೌದು ಸಾರ್ವಜನಿಕ ಸಾರಿಗೆ ಹೆಚ್ಚಾಗಿ ಬಳಸುವಂತೆ ನರೇಂದ್ರ ಮೋದಿಯವರು ಕರೆ ನೀಡಿರುವ ಬೆನ್ನೆನ್ನೇ ಇದೀಗ ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನಮ್ಮ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ.
ಪ್ರಧಾನಿ ಮೋದಿಯವರ ಕರೆಯಂತೆ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ತಮ್ಮ ಕಾರು ಮತ್ತು ಬೆಂಗಾವಲನ್ನು ಕಡಿತಗೊಳಿಸಿ ಸಾರ್ವಜನಿಕ ಸಾರಿಗೆಯನ್ನು ಬಳಸಿದರು. ಇದನ್ನೂ ಓದಿ:ನೂತನ ಜೀವನೋಪಾಯ ಸೇವಾ ಕೇಂದ್ರ ಕ್ಕೆ ಚಾಲನೆ
ಕುಂಬಳಗೂಡಿನಲ್ಲಿ ನಡೆಯಲಿರುವ ಬೆಂಗಳೂರು ದಕ್ಷಿಣ ಪ್ರಶಿಕ್ಷಣ ವರ್ಗ ಕಾರ್ಯಾಗಾರದಲ್ಲಿ ಭಾಗಿಯಾಗಲು ಮೆಜೆಸ್ಟಿಕ್ – ಕೆಂಗೇರಿ ನಡುವೆ ಮೆಟ್ರೋದಲ್ಲಿ ಪ್ರಯಾಣಿಸಿದರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
