ಬೆಂಗಳೂರು: ಬೆಂಗಳೂರಿನಲ್ಲಿರುವ ಆಸ್ತಿದಾರರು ಇನ್ಮುಂದೆಯಾವುದೇ ರೀತಿ ಆಸ್ತಿಗೆ ಸಂಬಂಧಿಸಿದಂತೆ ಆ ಕಚೇರಿ ಈ ಕಚೇರಿ ಎಂದು ಅಲೆದಾಡುವಂಥ ಪರಿಸ್ಥಿತಿ ಬಾರದಂತೆ ರಾಜ್ಯ ಸರ್ಕಾರವು ಹೊಸದಾಗಿ ಇ-ಖಾತಾ ಮೇಳವನ್ನು ಆರಂಭಿಸಿದೆ.
ಹೌದು, ಬೆಂಗಳೂರು ನಗರದಲ್ಲಿ ಇಂದಿನಿಂದ (ಶನಿವಾರ ಮೇ 16) ಪ್ರತಿ ಶನಿವಾರ ಇ-ಖಾತಾ ಮೇಳವನ್ನು ಆರಂಭಿಸಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರಿ ಸೇವೆಗಳು ಇದೀಗ ತಮ್ಮ ಮನೆ ಬಾಗಿಲಿಗೆ ಬರುವಂತೆ ರಾಜ್ಯ ಸರ್ಕಾರ ಮಾಡಿದೆ.
ಇನ್ನು ಬೆಂಗಳೂರು ಪೂರ್ವ ನಗರ ಪಾಲಿಕೆ ಹೊರಮಾವಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಇಂದು ಆರಂಭವಾದ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನ ಕೇಂದ್ರಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ರವರು ಭೇಟಿ ನೀಡಿ, ಪ್ರಕ್ರಿಯೆಯನ್ನು ಪರಿಶೀಲಿಸಿದರು. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆ!
ಈ ಸಂರ್ಭದಲ್ಲಿ ನಾಗರಿಕರ ಅಹವಾಲು ಆಲಿಸಿ, ಕಾರ್ಯಕ್ರಮದ ಉದ್ದೇಶ ವಿವರಿಸಿದರು. ಶಾಸಕ ಬೈರತಿ ಬಸವರಾಜ್, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಪೂರ್ವ ನಗರ ಪಾಲಿಕೆ ಆಯುಕ್ತ ರಮೇಶ್ ಡಿ.ಎಸ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಶ್ರೀನಿವಾಸ್, ಪೂರ್ವ ನಗರ ಪಾಲಿಕೆ ಗ್ಯಾರಂಟಿ ಯೋಜನೆ ಅಧ್ಯಕ್ಷೆ ಶಾಂಭವಿ, ಅಭಿವೃದ್ಧಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್, ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಸುಧಾ ಮತ್ತಿತರರು ಉಪಸ್ಥಿತರಿದ್ದರು.
