Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಳೆಗಾಲದ ವೇಳೆ ವಿಪತ್ತು ನಿರ್ವಹಣೆಗೆ ತ್ವರಿತ ಕ್ರಮ: ಮಹೇಶ್ವರ್ ರಾವ್
  • Bangalore
  • State

ಮಳೆಗಾಲದ ವೇಳೆ ವಿಪತ್ತು ನಿರ್ವಹಣೆಗೆ ತ್ವರಿತ ಕ್ರಮ: ಮಹೇಶ್ವರ್ ರಾವ್

Praja Vahini May 18, 2026
WhatsApp Image 2026-05-18 at 18.01.38
Spread the love

ಬೆಂಗಳೂರು: ವ್ಯಾಪ್ತಿಯಲ್ಲಿ “ವಿಪತ್ತು ನಿರ್ವಹಣೆಗಾಗಿ” ಸದಾ ಸನ್ನದ್ಧರಾಗಿರಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ಆದೇಶದ ಮೇರೆಗೆ ಎಲ್ಲಾ ನಗರ ಪಾಲಿಕೆಗಳಲ್ಲಿ ಪರೇಡ್ ನಡೆಸಲಾಗುತ್ತಿದೆ. ಅದರಂತೆ, ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಬನ್ನೇರುಘಟ್ಟ ರಸ್ತೆ ಹಾಗೂ ಜಯನಗರದ ಶಾಲಿನಿ ಮೈದಾನದಲ್ಲಿ ಏರ್ಪಡಿಸಿದ್ದ ಪರೇಡ್ ಸ್ಥಳಗಳಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಮುಂಗಾರು ಮಳೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಎಲ್ಲಾ ನಗರ ಪಾಲಿಕೆಗಳಲ್ಲಿ ವಿಭಾಗವಾರು ಮಳೆಗಾಲದ ಸಿದ್ಧತೆಗಳನ್ನು ಮಾಡಿಕೊಂಡಿರುವ ಕುರಿತು ಪರೇಡ್ ನಡೆಸಲು ಅಧಿಕಾರಿಗಳಿಗೆ ಸಮನ್ವಯ ಸಭೆಯಲ್ಲಿ ಸೂಚನೆ ನೀಡಲಾಗಿತ್ತು ಎಂದರು.

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ಬಿಜಿಎಸ್ ಮೈದಾನದಲ್ಲಿ ಈಗಾಗಲೇ ಪರೇಡ್ ನಡೆಸಲಾಗಿದ್ದು, ದಕ್ಷಿಣ ನಗರ ಪಾಲಿಕೆಯ ಶಾಲಿನಿ ಆಟದ ಮೈದಾನದಲ್ಲಿ ಇಂದು ಜಯನಗರ ಹಾಗೂ ಪದ್ಮನಾಭನಗರ ವಿಭಾಗಗಳು ಸೇರಿ ನಡೆಸಿದ ಪರೇಡ್ ಅನ್ನು ಪರಿಶೀಲಿಸಲಾಯಿತು. ಮಳೆಗಾಲ ಪ್ರಾರಂಭವಾಗುವುದಕ್ಕೂ ಮುಂಚಿತವಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಎಲ್ಲಿಯೂ ಯಾವುದೇ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಳೆಗಾಲದ ವೇಳೆ ವಿಪತ್ತು ನಿರ್ವಹಣೆಗೆ ಕಾರ್ಯನಿರ್ವಹಿಸುವ ಎಲ್ಲಾ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು, ಮಳೆಗಾಲದಲ್ಲಿ ಎಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಒಂದು ತಂಡವಾಗಿ ಸಕ್ರಿಯವಾಗಿ ಕೆಲಸ ಮಾಡಲು ಸೂಚಿಸಿದರು.  ಇದನ್ನೂ ಓದಿ: ಲಂಚ ಪಡೆದರೆ ಕಠಿಣ ಕ್ರಮ: ಡಿಕೆಶಿ

ಆಯಾ ನಗರ ಪಾಲಿಕೆಗಳಲ್ಲಿರುವ ಶಾಶ್ವತ ನಿಯಂತ್ರಣ ಕೊಠಡಿಗಳು ಹಾಗೂ ಉಪ ವಿಭಾಗವಾರು ಸ್ಥಾಪಿಸುವ ತಾತ್ಕಾಲಿಕ ನಿಯಂತ್ರಣ ಕೊಠಡಿಗಳು ನಾಗರಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ಲಂಚ ಪಡೆದರೆ ಕಠಿಣ ಕ್ರಮ: ಡಿಕೆಶಿ
Next: ಕಲಬುರಗಿ ನಗರದ ಸಮಗ್ರ ಅಭಿವೃದ್ದಿಗೆ ಬದ್ಧ: ಪ್ರಿಯಾಂಕ್ ಖರ್ಗೆ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.