ಮುಂಬೈ: ನಟ ಸಲ್ಮಾನ್ ಖಾನ್ ಅವರಿಗೆ ಈ ಮೊದಲು ಹಾವು ಕಚ್ಚಿದ ಘಟನೆ ಎಲ್ಲರಿಗೂ ಗೊತ್ತಿರುವ ಸಂಗತಿ. ಅದರಂತೆ ಇದೀಗ ಸಲ್ಮಾನ್ ಖಾನ್ ಅವರ ಅಪಾರ್ಟ್ಮೆಂಟ್ ಅಲ್ಲಿ ಹಾವು ಒಂದು ಪತ್ತೆಯಾಗಿರುವುದು ಅಪಾರ್ಟ್ಮೆಂಟ್ ನಿವಾಸಿಗಳಲ್ಲಿ ಅಚ್ಚರಿ ಮೂಡಿತಿದೆ.
ಹೌದು, ಸಲ್ಮಾನ್ ಖಾನ್ ಅವರ ಮುಂಬೈನ ಪ್ರಸಿದ್ಧ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಆವರಣದಲ್ಲಿ ನಿನ್ನೆ (ಸೋಮವಾರ ಮೇ 18) ಹಾವೊಂದು ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಅಪಾರ್ಟ್ಮೆಂಟ್ನ ನೆಲ ಅಂತಸ್ತಿನಲ್ಲಿ ಹಾವು ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಯು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಹಾವು ಹಿಡಿಯುವ ತಜ್ಞರು ಅತ್ಯಂತ ಜಾಣ್ಮೆಯಿಂದ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ತೆಲುಗಿನಲ್ಲಿ ಧೂಳೆಬ್ಬಿಸಲು ಸಜ್ಜದ ಕರುನಾಡ ಕಿಂಗ್
ಮುಂಬೈನ ಅತ್ಯಂತ ಪ್ರಸಿದ್ಧ ಸೆಲೆಬ್ರಿಟಿ ನಿವಾಸಗಳಲ್ಲಿ ಒಂದಾದ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿರುವುದರಿಂದ, ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
