Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಬಿಎ ಚುನಾವಣೆ ಕುರಿತು ಸುಪ್ರೀಂಕೋರ್ಟ್​​ನಿಂದ ಮಹತ್ವದ ಆದೇಶ
  • Bangalore
  • Politics
  • State

ಜಿಬಿಎ ಚುನಾವಣೆ ಕುರಿತು ಸುಪ್ರೀಂಕೋರ್ಟ್​​ನಿಂದ ಮಹತ್ವದ ಆದೇಶ

Praja Vahini May 20, 2026 1 minute read
WhatsApp Image 2026-05-20 at 14.43.56
Spread the love

ಬೆಂಗಳೂರು: ಜೂನ್ 30ರ ಒಳಗಾಗಿ ಜಿಬಿಎ ಚುನಾವಣೆ ಮಾಡಬೇಕೆಂದು ಈ ಮೊದಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತು. ಆದರೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿಗೆ ಇದೀಗ ಸುಪ್ರೀಂಕೋರ್ಟ್ ಜಿಪಿಎ ಚುನಾವಣೆ ನಡೆಸಲು ಎರಡು ತಿಂಗಳ ಕಾಲಾವಕಾಶ ನೀಡಿದೆ.

ಹೌದು, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಇದೀಗ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದ್ದು, ಆಗಸ್ಟ್ 31ರ ವರೆಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಇದರಿಂದ ಚುನಾವಣೆ ಗೊಂದಲ ಒಂದು ಹಂತಕ್ಕೆ ಬಂದು ತಲುಪಿದೆ.

ಇನ್ನು ಆಗಸ್ಟ್ 31 ಅಂತಿಮ ಅವಕಾಶವಾಗಿದ್ದು ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನೊಳಗೊಂಡ ಪೀಠ ಈ ಬಗ್ಗೆ ಆದೇಶ ನೀಡಿದ್ದು, ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಗಡುವು ವಿಸ್ತರಣೆ ಕೋರಿ ಮನವಿ ಸಲ್ಲಿಸಿದ್ದರು. ರಾಜ್ಯದಲ್ಲಿ ನಡೆಯಲಿರುವ ವಿಶೇಷ ಮತದಾರರ ಪರಿಶೀಲನೆ ಕಾರ್ಯದ ಹಿನ್ನೆಲೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗುತ್ತಿದೆ ಎಂದು ಅವರು ವಾದಿಸಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಹಿರಿಯ ವಕೀಲ ಕೆ. ಪರಮೇಶ್ವರ್, ಹಿಂದಿನ ಗಡುವು ವಿಸ್ತರಣೆ ವೇಳೆ ಜೂನ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಭರವಸೆ ನೀಡಿತ್ತು ಎಂದು ತಿಳಿಸಿದ್ದರು. ಇದನ್ನೂ ಓದಿ: ತುಮಕೂರು ಹೆಸರು ಬದಲಾವಣೆ ಕುರಿತು ಗೃಹ ಸಚಿವರು ಹೇಳಿದ್ದೇನು?

ಇದಕ್ಕೆ ಪ್ರತಿಕ್ರಿಯಿಸಿದ ಸಿಂಘ್ವಿ, ಚುನಾವಣೆಗೆ ಅಗತ್ಯ ಸಿದ್ಧತೆಗಳೆಲ್ಲ ಪೂರ್ಣಗೊಂಡಿದ್ದರೂ SIR ಕಾರ್ಯದಿಂದ ಸಿಬ್ಬಂದಿ ಸಮಸ್ಯೆ ಉಂಟಾಗಿದೆ. ಕನಿಷ್ಠ ಎರಡರಿಂದ 3 ತಿಂಗಳ ಅವಧಿ ವಿಸ್ತರಣೆ ಅಗತ್ಯವಾಗಿದೆ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇತ್ತ ರಾಜ್ಯ ಚುನಾವಣಾ ಆಯೋಗವೂ ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವಂತೆ ಕೋರ್ಟ್​​ ಈ ಹಿಂದೆ ನೀಡಿದ್ದ ಗಡುವು ವಿಸ್ತರಣೆಗೆ ಕೋರಿ ಮನವಿ ಮಾಡಿತ್ತು.

ಇದನ್ನೆಲ್ಲವನ್ನ ಪರಿಗಣಿಸಿ ಇದೀಗ ಸುಪ್ರೀಂ ಕೋರ್ಟ್ ಆಗಸ್ಟ್ 31ರವರೆಗೆ ಜಿಬಿಎ ಚುನಾವಣೆ ನಡೆಸಲು ಕಾಲಾವಕಾಶ ನೀಡಿದೆ.

About the Author

Praja Vahini

Editor

View All Posts

Spread the love

Post navigation

Previous: ತುಮಕೂರು ಹೆಸರು ಬದಲಾವಣೆ ಕುರಿತು ಗೃಹ ಸಚಿವರು ಹೇಳಿದ್ದೇನು?
Next: ರಾಜ್ಯದಲ್ಲಿ ಹೆಚ್ಚಾಯ್ತು ಡ್ರಗ್ಸ್ ಹಾವಳಿ; 34 ಕೋಟಿ ಮೌಲ್ಯದ ಡ್ರಗ್ಸ್​​ ಜಪ್ತಿ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.