ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಡ್ರಗ್ಸ್ ದಂದೆ ಹೆಚ್ಚಾಗಿದ್ದು, ಇದೀಗ ಬೆಂಗಳೂರು ಪೊಲೀಸರು ಭರ್ಜರಿ ಭೇಟಿ ಆಡಿರೋದ್ರಿಂದ ಸುಮಾರು 34 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಹೌದು, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್ನ ಹೆಡೆಮುರಿ ಕಟ್ಟಿದ್ದಾರೆ. 8 ಜನ ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು, ಈ ಒಂದೇ ತಂಡದಿಂದ ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಬೇರೆ ರಾಜ್ಯಗಳಿಂದ ಡ್ರಗ್ಸ್ ಆಮದು ಮಾಡಿಕೊಂಡು ನಗರದಲ್ಲಿ ವಿವಿಧ ಭಾಗಗಳಲ್ಲಿ ಡ್ರಗ್ಸ್ ಸಾಧಿಸುತ್ತಿದ್ದರು ಎಂದು ಆರೋಪಿಗಳು ಖುದ್ದು ತಾವೇ ಒಪ್ಪಿಕೊಂಡಿದ್ದಾರೆ.
ಇನ್ನು ಆರೋಪಿಗಳ ಈ ಜಾಲ 3 ಗುಂಪುಗಳಾಗಿ ಕೆಲಸ ಮಾಡುತ್ತಿತ್ತು. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು ನಾನಾ ದಾರಿಗಳನ್ನು ಕಂಡುಕೊಂಡಿದ್ದರು ಎಂಬುದು ಕೂಡ ತನಿಖೆ ವೇಳೆ ಗೊತ್ತಾಗಿದೆ.
ದೆಹಲಿಯಿಂದ ರೈಲಿನಲ್ಲಿ ಡ್ರಗ್ಸ್ ಸಾಗಿಸಿದ್ದ ಆರೋಪಿಗಳು ಅವನ್ನು ಸೀರೆ, ಐರನ್ ಮಾಡಲು ಬಳಸುವ ಟೇಬಲ್ ಮತ್ತು ಚೇರ್ಗಳಲ್ಲಿ ಅಡಗಿಸಿಟ್ಟು ತಂದಿದ್ದರು. ಗಿಫ್ಟ್ ರೀತಿಯಲ್ಲಿ ಪ್ಯಾಕ್ ಮಾಡಿ ಅವುಗಳ ಸಾಗಾಟ ಮಾಡಿದ್ದರು. ರೈಲಲ್ಲಿ ಸಾಗಿಸಿ ತಂದಿದ್ದ ಈ ಮಾದಕ ವಸ್ತುಗಳನ್ನು ಕಾರಿಗೆ ಶಿಫ್ಟ್ ಮಾಡುವ ವೇಳೆ ದಾಳಿ ನಡೆಸಿರುವ ಪೊಲೀಸರು 4 ಕೆಜಿ 300 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಜಿಬಿಎ ಚುನಾವಣೆ ಕುರಿತು ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ
ಚಾರಣೆ ವೇಳೆ ಸರ್ಜಾಪುರದ ಮನೆಯೊಂದರಲ್ಲಿ ಬಾಕಿ ಡ್ರಗ್ಸ್ ಇಟ್ಟಿರುವ ಮಾಹಿತಿ ಸಿಕ್ಕ ಹಿನ್ನೆಲೆ ಬೆಂಗಳೂರಿನ ಪೆಡ್ಲರ್ ಮನ್ಸೂರ್ ನಿವಾಸದಲ್ಲಿ ದಾಳಿ ನಡೆಸಲಾಗಿತ್ತು. ರೇಡ್ ವೇಳೆ ಮನೆಯಲ್ಲಿ 10 ಕೆಜಿ ಎಂಡಿಎಂಎ ಪತ್ತೆಯಾಗಿದೆ. ಬಳಿಕ ಅಬ್ದುಲ್ ಸಮಾದ್ ನಿವಾಸದಲ್ಲಿಯೂ ಡ್ರಗ್ಸ್ ಇರುವ ಬಗ್ಗೆ ಮಾಹಿತಿ ಆಧಾರದಲ್ಲಿ ಆತನ ಹೆಣ್ಣೂರು ನಿವಾಸದಲ್ಲಿ ತಪಾಸಣೆ ನಡೆಸಿದಾಗ 3.5 ಕೆಜಿ ಎಂಡಿಎಂಎ ಸಿಕ್ಕಿದೆ. ಆ ಮೂಲಕ ಒಟ್ಟು 34 ಕೋಟಿ ಮೌಲ್ಯದ 17 ಕೆಜಿಗೂ ಹೆಚ್ಚಿನ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
