ಮೈಸೂರು: ಇತ್ತೀಚಿನ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು ಸಾರ್ವಜನಿಕರ ಮೇಲೆ ಕೈ ಮಾಡುವುದು ಸಾಮಾನ್ಯವಾಗಿ ಬಿಟ್ಟಂತಿದೆ.
ಹೌದು, ರಾಜಕೀಯ ವ್ಯಕ್ತಿಗಳು ಇತ್ತೀಚಿಗೆ ಜನ ಸಾಮಾನ್ಯರ ಮೇಲೆ ಕೈ ಮಾಡುತ್ತಿರುವುದು ಬೆಳಕಿಗೆ ಬರುತ್ತಿದ್ದು, ಇದಕ್ಕೆ ಉದಾಹರಣೆ ಎಂಬಂತೆ ಇದೀಗ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರ 55 ಲಕ್ಷ ಹಿಂದಿರುಗಿಸದ ಸಾಲವನ್ನು ಕೇಳಲು ಹೋದಾಗ ವಿಶ್ವನಾಥ್ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಅವರು ಆರೋಪಿಸಿ ದೂರು ದಾಖಲಿಸಿದ್ದಾರೆ.
ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವನಾಥ್ ಇರುವಾಗ ಹಣ ಕೇಳಲು ಹೋದ ವೇಳೆ ಈ ಘಟನೆ ನಡೆದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ದೂರು ನೀಡಿದ್ದಾರೆ.
ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಾಗಿದೆ. 2013ರಲ್ಲಿ ವಿಶ್ವನಾಥ್ ಎಂಪಿ ಆಗಿದ್ದಾಗ ಕೋಟೆಹುಂಡಿ ಮಹದೇವು, MTB ನಾಗರಾಜ್ ಮುಖಾಂತರ ವಿಶ್ವನಾಥ್ ಹಾಗೂ ಮಗ ಅಮಿತ್ ದೇವರಹಟ್ಟಿ ಅವರಿಗೆ 55 ಲಕ್ಷ ನೀಡಿದ್ದಾರೆ. ಹಣ ಹಿಂದಿರುಗಿಸುವುದಾಗಿ ಸಾಲ ಪಡೆದ ವಿಶ್ವನಾಥ್ ಸತಾಯಿಸಿದ್ದಾರೆ. ಈ ಬಗ್ಗೆ 2026ರ ಫೆಬ್ರವರಿಯಲ್ಲಿ ವಿಶ್ವನಾಥ್ ಅವರು ಜಲದರ್ಶಿನಿಯಲ್ಲಿ ಇರುವಾಗ ಕೋಟೆಹುಂಡಿ ಮಹದೇವು ಹಣ ಕೇಳಲು ಹೋದಾಗ ಅವಾಚ್ಯ ಪದಗಳಿಂದ ನಿಂದಿಸಿ ಕೈಯಲ್ಲಿ ತಲೆಗೆ ಹೊಡೆದಿದ್ದಾರೆ. ಇದನ್ನೂ ಓದಿ: ಜಿಬಿಎ ಚುನಾವಣೆ ಕುರಿತು ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ
ಈ ಬಗ್ಗೆ ಕೋಟೆಹುಂಡಿ ಮಹದೇವು ಅವರು ದೇವರಾಜ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಿದ್ದರು. ನಂತರ ಘನ ನ್ಯಾಯಾಲಯದ ಮೊರೆಹೋಗಿ ಪ್ರಕರಣ ದಾಖಲಿಸುವಂತೆ ಆದೇಶ ತಂದಿದ್ದಾರೆ.
